ETV Bharat / bharat

ಯುಪಿಯಲ್ಲಿ ಅತ್ಯಂತ ಅಮಾನವೀಯ ಕೃತ್ಯ: 3 ತಿಂಗಳ ಹಸುಳೆ ಮೇಲೆ ಕಾಮುಕನಿಂದ ಅತ್ಯಾಚಾರ - uttar pradesh rape

ಮೂರು ತಿಂಗಳ ಹಸುಳೆ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

3-month-old raped by minor boy in UP's Etah

author img

By

Published : Aug 16, 2021, 9:50 AM IST

ಇಟಾ(ಉತ್ತರ ಪ್ರದೇಶ): ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಮಗು ಅಳುವುದಕ್ಕೆ ಶುರು ಮಾಡಿದಾಗ ತಾಯಿ ಬಂದು ನೋಡಿದ್ದಾಳೆ. ಈ ವೇಳೆ ಮಗುವಿನ ಖಾಸಗಿ ಭಾಗದಲ್ಲಿ ರಸ್ತಸ್ರಾವವಾಗುತ್ತಿರುವುದು ಕಂಡುಬಂದಿದೆ. ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ಬೇರೆಡೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಗು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: 'ಅಜಾತಶತ್ರು'ವಿನ ಪುಣ್ಯಸ್ಮರಣೆ: ಗೌರವ ನಮನ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ ಮೋದಿ

ಈ ಘಟನೆಗೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ, ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆದರೆ ಘಟನೆ ನಡೆದ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.