ETV Bharat / bharat

ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು, 12 ಮಂದಿಗೆ ಗಾಯ - ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು

ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಸ್​ಗಂಜ್​ನಲ್ಲಿ ನಡೆದಿದೆ.

construction building collision
construction building collision
author img

By

Published : May 23, 2021, 3:29 PM IST

ಕಾಸ್​ಗಂಜ್​​(ಉತ್ತರ ಪ್ರದೇಶ): ಕಾಸ್​ಗಂಜ್​​​ ಜಿಲ್ಲೆಯ ಸದರ್​ ಕೊತ್ವಾಲಿ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತ

ನಿರ್ಮಾಣ ಹಂತದ ಕಟ್ಟಡವೊಂದು ಏಕಾಏಕಿ ಕುಸಿದ ಕಾರಣ ಈ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಗೊಂಡಿರುವ ಎಲ್ಲರನ್ನೂ ತಕ್ಷಣವೇ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಉದ್ಯಮಿ ರಾಜೀವ್ ಬಿರ್ಲಾ ಅವರಿಗೆ ಸೇರಿದ ಕಟ್ಟಡ ಇದಾಗಿದ್ದು, ದುರ್ಘಟನೆಯಲ್ಲಿ ಅವರ ಸಹೋದರ ಕುಲದೀಪ್​ ಬಿರ್ಲಾ ಸಹ ಮೃತಪಟ್ಟಿದ್ದಾರೆ. ಜಿಲ್ಲಾಡಳಿತಕ್ಕೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ರವಾನಿಸಿ, ಅವಶೇಷಗಳಡಿ ಸಿಲುಕ್ಕಿದ್ದ 12 ಜನರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಕುಲದೀಪ್​ ಬಿರ್ಲಾ ಹಾಗೂ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

construction building collision
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ಜೆಸಿಬಿ ಯಂತ್ರದ ಮೂಲಕ ಸಿಲುಕಿಕೊಂಡಿರುವ ಕಾರ್ಮಿಕರ ಹುಡುಕಾಟ ಕಾರ್ಯ ಮುಂದುವರೆದಿದ್ದು, ಸ್ಥಳದಲ್ಲಿ ಜಿಲ್ಲಾಧಿಕಾರಿ, ಎಸ್​​ಪಿ ಸೇರಿದಂತೆ ಉನ್ನತ ಅಧಿಕಾರಿಗಳು ಹಾಜರಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪರಿಹಾರ ಹಾಗೂ ರಕ್ಷಣಾ ಕಾರ್ಯ ತ್ವರಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.