ಶೋಪಿಯಾನ್ (ಜಮ್ಮು- ಕಾಶ್ಮೀರ): ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಅಲ್-ಬದ್ರ್ ಎಂಬ ಭಯೋತ್ಪಾದಕ ಸಂಘಟನೆಗೆ ಹೊಸದಾಗಿ ಸೇರ್ಪಡೆಗೊಂಡಿದ್ದ ನಾಲ್ವರು ಉಗ್ರರು ಶೋಪಿಯಾನ್ನ ಕನಿಗಂ ಪ್ರದೇಶದಲ್ಲಿರುವುದನ್ನು ಭದ್ರತಾ ಪಡೆ ಪತ್ತೆ ಮಾಡಿತ್ತು. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ಮೂವರನ್ನು ಹತ್ಯೆಗೈಯ್ಯಲಾಗಿದ್ದು, ತೌಸಿಫ್ ಅಹ್ಮದ್ ಎಂಬ ಓರ್ವ ಉಗ್ರ ಶರಣಾಗಿದ್ದಾನೆ.
ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ 'ನಾಯಿ' ಅರೆಸ್ಟ್!
ಕನಿಗಂ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿರುವುದಾಗಿ ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.