ಭುವನೇಶ್ವರ, ಒಡಿಶಾ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್ (NISER) ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಮಾರು 31 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳಲ್ಲಿ ವೈರಸ್ ಹರಡುವುದನ್ನು ತಪ್ಪಿಸಲು ಹಾಸ್ಟೆಲ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಹಾಸ್ಟೆಲ್‌ನ ವಿದ್ಯಾರ್ಥಿಗಳನ್ನು ಹಾಸ್ಟೆಲ್ನಲ್ಲಿಯೇ ಉಳಿಸಿ, ಹೊರಗಿನ ವ್ಯಕ್ತಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಸೋಂಕಿತರನ್ನು ಬೇರೆ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಇರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎನ್ಐಎಸ್ಇಆರ್ ಕ್ಯಾಂಪಸ್ ಅನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕಿತರು NISER ಸಂಸ್ಥೆಯ ಮೊದಲ ವರ್ಷದ ವಿದ್ಯಾರ್ಥಿಗಳು ಎಂದು ಮೂಲಗಳು ತಿಳಿಸಿದ್ದು, ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಹಾಸ್ಟೆಲ್‌ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಐಎಸ್ ಸಂಪರ್ಕದಲ್ಲಿ ಯುವಕ-ಯುವತಿಯರು..ದೇಶ ವಿರೋಧಿ ಚಟುವಟಿಕೆಯ ತಾಣವಾಗುತ್ತಿದೆಯಾ ಕಾಶ್ಮೀರ, ಮಂಗಳೂರು, ಬೆಂಗಳೂರು!