ಭುವನೇಶ್ವರ್(ಒಡಿಶಾ): ಮಹತ್ವದ ಕಾರ್ಯಾಚರಣೆಯಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್(ಆರ್ಪಿಎಫ್) ಸಿಬ್ಬಂದಿ 32 ಕೆಜಿ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂಬೈ-ಭುವನೇಶ್ವರ್ ಕೊನಾರ್ಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಮುಂಬೈನಿಂದ ಒಡಿಶಾಗೆ ಈ ಚಿನ್ನ ಸಾಗಾಟ ಮಾಡಲಾಗುತ್ತಿತ್ತು. ಈ ಕುರಿತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ಭೀಕರ ಕಾರು ಅಪಘಾತ; ಮಧ್ಯಪ್ರದೇಶದ ಇಬ್ಬರು ಯುವಕರು ದುರ್ಮರಣ
ರೈಲಿನಲ್ಲಿ ಎಂಟು ಬ್ಯಾಗ್ಗಳಿಂದ ಇಷ್ಟೊಂದು ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.