ETV Bharat / bharat

ಮೋಟಾರ್​​ ಶೋ ರೂಂನಲ್ಲಿ ಅಗ್ನಿ ಅವಘಡ: 36 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮ - Manam Motors in Palakonda town

ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಪಾಲಕೊಂಡ ಪಟ್ಟಣದ ಮನಂ ಮೋಟಾರ್ಸ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 36 ಎಲೆಕ್ಟ್ರಿಕ್​ ಬೈಕ್​ಗಳು ಬೆಂಕಿಗೆ ಆಹುತಿಯಾಗಿವೆ.

huge fire in a motor showroom
huge fire in a motor showroom
author img

By

Published : Oct 24, 2022, 12:43 PM IST

ಅಮರಾವತಿ: ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಮೋಟಾರು ಶೋ ರೂಂನಲ್ಲಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 36 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮುಂಜಾನೆ ಪಾಲಕೊಂಡ ಪಟ್ಟಣದ ಮನಂ ಮೋಟಾರ್ಸ್‌ನಲ್ಲಿ ಈ ಘಟನೆ ನಡೆದಿದೆ. ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಶೋರೂಮ್‌ನಲ್ಲಿ ಇರಿಸಲಾಗಿದ್ದ, ಇ-ಬೈಕ್‌ಗಳು ಮತ್ತು ಬ್ಯಾಟರಿಗಳು ಬೆಂಕಿಗೆ ಆಹುತಿಯಾಗಿವೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ತನಿಖೆಯ ನಂತರ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

ಬೆಂಕಿ ಅವಘಡದಿಂದ ಸುಮಾರು 50 ಲಕ್ಷ ರೂ.ನಷ್ಟ ಸಂಭವಿಸಿದೆ ಎಂದು ಶೋರೂಂ ಆಡಳಿತ ಮಂಡಳಿ ತಿಳಿಸಿದೆ. ಕಳೆದ ತಿಂಗಳು ಹೈದರಾಬಾದ್‌ನ ಇ-ಬೈಕ್ ಶೋರೂಮ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಎಂಟು ಮಂದಿ ಮೃತಪಟ್ಟಿದ್ದರು. ಬಹುಮಹಡಿ ಕಟ್ಟಡದ ನೆಲಮಾಳಿಗೆಯಲ್ಲಿರುವ ಶೋರೂಮ್‌ನಿಂದ ಉಂಟಾದ ಬೆಂಕಿ ಮೇಲಿನ ಮಹಡಿಯಲ್ಲಿರುವ ಹೋಟೆಲ್‌ಗೆ ವ್ಯಾಪಿಸಿತ್ತು. ಹೀಗಾಗಿ ಎಂಟು ಜನ ಸಾವಿಗೀಡಾಗಿ, ಹೋಟೆಲ್‌ನಲ್ಲಿ ತಂಗಿದ್ದ ಒಂಬತ್ತು ಮಂದಿ ಗಾಯಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.