ETV Bharat / bharat

ದೇಶದಲ್ಲಿ ಹೊಸದಾಗಿ 37,593 ಮಂದಿಗೆ ಕೋವಿಡ್‌ ದೃಢ: 648 ಜನ ಸಾವು - ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಕೋವಿಡ್​ನಿಂದ ಚೇತರಿಕೆ ಕಾಣುವವರ ಪ್ರಮಾಣ ಕೂಡ ಏರಿಕೆಯಾಗುತ್ತಿದೆ.

ಕೊರೊನಾ
COVID
author img

By

Published : Aug 25, 2021, 10:42 AM IST

ನವದೆಹಲಿ: ದೇಶದಲ್ಲಿ ಹೊಸದಾಗಿ 37,593 ಮಂದಿಯಲ್ಲಿ ಕೋವಿಡ್​ ಸೋಂಕು ಕಾಣಿಸಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 648 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 34,169 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 3,17,54,281 ಜನರು ಕೊರೊನಾದಿಂದ ಚೇತರಿಕೆ ಕಂಡಿದ್ದಾರೆ. ದೇಶದಲ್ಲಿ ಚೇತರಿಕೆಯ ಪ್ರಮಾಣ 97.68% ಇದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 648 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 4,35,758 ಕ್ಕೆ ಏರಿಕೆಯಾಗಿದೆ. 3,22,327 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕು ಪರೀಕ್ಷಾ ಪ್ರಮಾಣ:

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಕಾರ, ದೇಶದಲ್ಲಿ ಆಗಸ್ಟ್ 24 ರವರೆಗೆ 51,11,84,547 ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನದಲ್ಲಿ 17,92,755 ಮಂದಿಯ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.