ಶ್ರೀನಗರ( ಜಮ್ಮು ಕಾಶ್ಮೀರ): ಶ್ರೀನಗರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದೆ. ಬೀದಿ ನಾಯಿಗಳ ದಾಳಿಯಲ್ಲಿ 17 ಪ್ರವಾಸಿಗರು ಸೇರಿದಂತೆ 39 ಜನರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಶ್ರೀನಗರದ ದಾಲ್ಗೇಟ್ ಪ್ರದೇಶದಲ್ಲಿ ಬೀದಿ ನಾಯಿಗಳ ಹಿಂಡು ದಾಳಿ ಮಾಡಿದ್ದರಿಂದ 39 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳಲ್ಲಿ 17 ಪ್ರವಾಸಿಗರು ಮತ್ತು 22 ಸ್ಥಳೀಯರು ಸೇರಿದ್ದಾರೆ. ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಕವಾಲ್‌ಜೀತ್ ಸಿಂಗ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, 39 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ದಾಲ್ ಸರೋವರದ ದಂಡೆಯಲ್ಲಿರುವ ಡಾಲ್ಗೇಟ್ ಪ್ರದೇಶವು ಶ್ರೀನಗರ ನಗರದ ಪ್ರವಾಸಿ ಚಟುವಟಿಕೆಯ ಕೇಂದ್ರ ಬಿಂದುವಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜನರು ಮನವಿ ಮಾಡಿದ್ದಾರೆ.
ಇದನ್ನು ಓದಿ:ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ: ಪತ್ನಿ, ಮಕ್ಕಳು ಮನೆಯಲ್ಲಿರುವಾಗಲೇ ಕೃತ್ಯ!