ETV Bharat / bharat

ತಡರಾತ್ರಿ ಪ್ರಿಯಕರನ ಭೇಟಿ ಮಾಡಲು ತೆರಳಿದ್ದ ಪ್ರಿಯತಮೆ.. ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ನಾಲ್ವರು! - ತಡರಾತ್ರಿ ಪ್ರಿಯಕರನ್ನು ಭೇಟಿ ಮಾಡಲು ತೆರಳಿದ್ದ ಪ್ರಿಯತಮೆ

ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ನಾಲ್ವರು - ಆರೋಪಿಗಳನ್ನು ಬಂಧಿಸಿದ ಪೊಲೀಸರು

murder after raping woman in Uttara Pradesh, Rape accused arrested in Uttar Pradesh, Uttar Pradesh crime news,  ಉತ್ತರಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಉತ್ತರಪ್ರದೇಶದಲ್ಲಿ ಅತ್ಯಾಚಾರ ಆರೋಪಿಗಳು ಬಂಧನ, ಉತ್ತರಪ್ರದೇಶ ಅಪರಾಧ ಸುದ್ದಿ,
ತಡರಾತ್ರಿ ಪ್ರಿಯಕರನ್ನು ಭೇಟಿ ಮಾಡಲು ತೆರಳಿದ್ದ ಪ್ರಿಯತಮೆ
author img

By

Published : Aug 4, 2022, 11:42 AM IST

ಜೌನ್‌ಪುರ(ಉತ್ತರಪ್ರದೇಶ): ಜಿಲ್ಲೆಯ ಬಕ್ಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಯುವತಿಯೊಬ್ಬಳ ಮೇಲೆ ಪ್ರಿಯಕರನ ಸ್ನೇಹಿತರು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲ ಯುವತಿಯ ಶವ ಬಾವಿಗೆ ಎಸೆದು ಪರಾರಿಯಾಗಿದ್ದರು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 23 ರಂದು ಬಕ್ಷಾ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿದ್ದಾಳೆ ಎಂದು ತಂದೆಯೊಬ್ಬರು ದೂರು ನೀಡಿದ್ದರು. ಇದಾದ ಬಳಿಕ ಜುಲೈ 28ರಂದು ಗ್ರಾಮದ ಹಳೆಯ ಬಾವಿಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ಆರಂಭಿಸಿದ್ದರು.

ಆಗಸ್ಟ್ 2 ರಂದು ಸಂತ್ರಸ್ತೆಯ ತಂದೆ ತನ್ನ ಮಗಳ ಕೊಲೆಗೆ ಸಂಬಂಧಿಸಿದಂತೆ 4 ಜನರ ವಿರುದ್ಧ ಅತ್ಯಾಚಾರ ಮತ್ತು ಕೊಲೆಯ ದೂರು ದಾಖಲಿಸಿದ್ದರು. ತನಿಖೆಯ ಸಂದರ್ಭದಲ್ಲಿ ಖಚಿತ ಮಾಹಿತಿಯ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಧನಿಯಾಮೌ ಹೆದ್ದಾರಿಯಿಂದ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಬಳಸಿದ್ದ ಚಾಕುವನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜುಲೈ 23 ರಂದು ತಡರಾತ್ರಿ ಪ್ರಿಯಕರನ್ನು ಭೇಟಿ ಮಾಡಲು ತೆರಳಿದ್ದ ಪ್ರಿಯತಮೆ ಮೇಲೆ ಯುವಕನ ನಾಲ್ವರು ಸ್ನೇಹಿತರು ಅತ್ಯಾಚಾರ ಎಸಗಿದ್ದಾರೆ. ಬಳಿಕ ಚಾಕುವಿನಿಂದ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದಾರೆ ಎಂದು ಎಸ್ಪಿ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.

ತನಿಖೆ ವೇಳೆ ಪೊಲೀಸರು ಬಾಲಕಿಯ ಮೊಬೈಲ್ ಪರಿಶೀಲಿಸಿದ್ದಾರೆ. ಇದರಲ್ಲಿ ನಾಲ್ವರು ಆರೋಪಿಗಳ ಹೆಸರು ಹೊರ ಬಿದ್ದಿದೆ. ಇದರ ನಂತರ ಪೊಲೀಸರು ನಾಲ್ವರು ಆರೋಪಿಗಳನ್ನು ಧನಿಯಾಮೌ ಹೆದ್ದಾರಿಯಿಂದ ಬಂಧಿಸಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ವಿಚಾರಣೆ ನಡೆಸಿದಾಗ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಸದ್ಯ ಎಲ್ಲ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: 27 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮರುಜೀವ ಕೊಟ್ಟ 'ಡಿಎನ್​ಎ'!

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.