ETV Bharat / bharat

ನಾಲ್ವರು ಕೋವಿಡ್​ ಸೋಂಕಿತರ ಸಾವು: ವೈದ್ಯರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

author img

By

Published : Apr 26, 2021, 9:46 PM IST

ವೈದ್ಯರ ನಿರ್ಲಕ್ಷ್ಯದಿಂದ ನಾಲ್ವರು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಕಾರಣ ಇದೀಗ ತನಿಖೆ ನಡೆಸಲು ಆದೇಶ ನೀಡಲಾಗಿದೆ.

COVID Death
COVID Death

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಹಾವಳಿ ಜೋರಾಗಿದ್ದು, ನಿತ್ಯ ಅನೇಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಕೆಲವರು ಸಾವನ್ನಪ್ಪುವಂತಹ ಪ್ರಕರಣ ದಾಖಲಾಗುತ್ತಿವೆ.

ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ನಾಲ್ವರು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಇದೀಗ ಜಿಲ್ಲಾಧಿಕಾರಿ ರಾಜೇಶ್​ ನರ್ವೇಕರ್​ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.

ಇವರ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್​ ಪೂರೈಕೆ ಮಾಡಲು ವಿಫಲವಾದ ಕಾರಣ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆ ನಡೆಯುತ್ತಿದ್ದಂತೆ ವಸತಿ ಸಚಿವ ಜಿತೇಂದ್ರ ಅವಾದ್​ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್​ ದವ್ಖಾರೆ ಆಸ್ಪತ್ರೆಗೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.