ETV Bharat / bharat

ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಕೊಳೆತ ಸ್ಥಿತಿಯಲ್ಲಿ ಪತ್ತೆ.. ಕಾರಣ ನಿಗೂಢ! - dead bodys found in odisha

ಒಳಗಿನಿಂದ ಲಾಕ್​ ಮಾಡಲಾಗಿದ್ದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಒಡಿಶಾದ ಬರ್ಗಢ ಎಂಬಲ್ಲಿ ಇದು ಬೆಳಕಿಗೆ ಬಂದಿದೆ.

4-decomposed-bodies-found-in-house-in-Odisha
ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಕೊಳೆತ ಸ್ಥಿತಿಯಲ್ಲಿ ಪತ್ತೆ
author img

By

Published : Oct 31, 2022, 8:39 AM IST

ಬರ್ಗಢ(ಒಡಿಶಾ): ಇಲ್ಲಿನ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ಕು ಜನರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆ ಬಾಗಿಲನ್ನು ಒಳಗಿನಿಂದ ಲಾಕ್​ ಮಾಡಲಾಗಿದೆ. ಇದು ಕೊಲೆಯೋ ಆತ್ಮಹತ್ಯೆಯೇ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

ಕೆಲ ದಿನಗಳಿಂದ ಕುಟುಂಬ ಸದಸ್ಯರು ಕಾಣಿಸಿಕೊಂಡಿರಲಿಲ್ಲ. ಕಳೆದ 2 ದಿನಗಳಿಂದ ಮನೆಯಿಂದ ದುರ್ನಾತ ಬರುತ್ತಿತ್ತು. ಇದರಿಂದ ಅನುಮಾನಗೊಂಡ ನೆರೆಹೊರೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಯ ಬಾಗಿಲನ್ನು ಮುರಿದು ಪರಿಶೀಲಿಸಿದಾಗ ಮನೆಯಲ್ಲಿ ನಾಲ್ಕು ಶವಗಳು ಕೊಳೆತ ರೀತಿಯಲ್ಲಿ ಪತ್ತೆಯಾಗಿವೆ. ಒಳಗಡೆ ಲಾಕ್​ ಮಾಡಿ ಸಾವನ್ನಪ್ಪಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಧಿವಿಜ್ಞಾನ ತಜ್ಞರ ಸಮ್ಮುಖದಲ್ಲಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳಿಕ ಮನೆಯನ್ನು ಸೀಲ್​ ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಓದಿ: ಸೆಪ್ಟಿಕ್​ ಟ್ಯಾಂಕ್​​​​​​ನಲ್ಲಿ ಇಳಿದ ಮೂವರ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.