ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮಧ್ಯಾಹ್ನ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.7ರಷ್ಟು ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದು ತಜಕಿಸ್ತಾನ್ ಗಡಿ ಪ್ರದೇಶದಲ್ಲಿದೆ. ಭೂಮಿಯ 202 ಕಿಮೀ ಆಳದಲ್ಲಿ ಅಕ್ಷಾಂಶ 36.52 ಡಿಗ್ರಿ ಉತ್ತರ ಮತ್ತು ರೇಖಾಂಶ 71.18 ಡಿಗ್ರಿ ಪೂರ್ವದಲ್ಲಿ ಕಂಪನ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅಮರಾವತಿ ಐತಿಹಾಸಿಕ ತೀರ್ಪು ನೀಡಿದ ಜಡ್ಜ್ ನಿವೃತ್ತ: ರೈತರಿಂದ ಅದ್ಧೂರಿ ಬೀಳ್ಕೊಡುಗೆ