ಕೋಲ್ಕತ್ತಾ: ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆ ಪ್ರದೇಶದಲ್ಲಿ ಸೋಮವಾರ ಸಂಜೆ ಬಹುಮಹಡಿ ಕಟ್ಟಡದ 13 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 9 ಸಿಬ್ಬಂದಿ ಮೃತಪಟ್ಟಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ಈಗಾಗಲೇ ಹಲವಾರು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ.
ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿ, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಒಬ್ಬರು ಪೊಲೀಸ್ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆಯ ನ್ಯೂ ಕೊಯಿಲಾಘಾಟ್ ಕಟ್ಟಡದಲ್ಲಿ ಈ ದುರಂತ ನಡೆದಿದೆ. ಈ ಕಟ್ಟಡವು ರೈಲ್ವೆ ಕಚೇರಿಗಳನ್ನು ಹೊಂದಿದೆ. ಕೋಲ್ಕತಾ ಮಾಜಿ ಮಹಾನಗರ ಪಾಲಿಕೆ (ಕೆಎಂಸಿ) ಮೇಯರ್ ಮತ್ತು ಮುಖ್ಯ ಆಡಳಿತಾಧಿಕಾರಿ ಫಿರ್ಹಾದ್ ಹಕೀಮ್ ಮತ್ತು ಪಶ್ಚಿಮ ಬಂಗಾಳದ ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ಈಗಾಗಲೇ ಸ್ಥಳಕ್ಕೆ ತಲುಪಿದ್ದಾರೆ.
ಕಟ್ಟಡದಲ್ಲಿ ಬೆಂಕಿ ಯಾಕೆ ಆವರಿಸಿದೆ ಎಂದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಪೂರ್ವ ರೈಲ್ವೆಯ ಎಲ್ಲಾ ವಲಯಗಳಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸುವುದನ್ನು ಸ್ಥಗಿತಗೊಳಿಸಿದೆ.
ಬ್ಯಾನರ್ಜಿ ಸಂತಾಪ:
ಘಟನೆ ಹಿನ್ನೆಲೆ ಸಂತಾಪ ಸೂಚಿಸಿರುವ ಮಮತಾ ಬ್ಯಾನರ್ಜಿ, ಮೃತ ವ್ಯಕ್ತಿಯ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.