ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡುಬರುತ್ತಿದೆ. ಸುಪ್ರೀಂ ಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳು ಮತ್ತು ಸುಮಾರು 5 ಪ್ರತಿಶತ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ಗೆ ಬಂದಿದೆ.
ಸರ್ವೋಚ್ಚ ನ್ಯಾಯಾಲಯದ 32 ನ್ಯಾಯಮೂರ್ತಿಗಳ ಪೈಕಿ ನಾಲ್ವರು ನ್ಯಾಯಮೂರ್ತಿಗಳು ಮತ್ತು 3000 ಉದ್ಯೋಗಿಗಳಲ್ಲಿ 150 ಮಂದಿಗೆ ಕೊರೊನಾ ವಕ್ಕರಿಸಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶನಿವಾರ ದೆಹಲಿಯಲ್ಲಿ ಕೊರೊನಾದಿಂದ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 20,181 ಹೊಸ ಪ್ರಕರಣಗಳು ವರದಿಯಾಗಿದ್ದವು. ಅದೇ ಸಮಯದಲ್ಲಿ ಸೋಂಕಿನ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ.