ETV Bharat / bharat

ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, 22 ಮಂದಿಗೆ ಗಾಯ - ಬಸ್​ಗೆ ಟ್ರಕ್​ ಡಿಕ್ಕಿ

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಬಸ್​ಗೆ ಟ್ರಕ್​ ಡಿಕ್ಕಿ - ನಾಲ್ವರು ಸಾವು, 22 ಮಂದಿಗೆ ಗಾಯ. ಕಾಟ್ರಾಜ್ ಘಾಟ್ ಬಳಿಯ ಸ್ವಾಮಿನಾರಾಯಣ ದೇವಸ್ಥಾನ ಬಳಿ ನಡೆದ ಅವಘಡ.

MH Truck Bus accident on Pune Bangalore highway
ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ
author img

By

Published : Apr 23, 2023, 9:59 AM IST

ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ

ಪುಣೆ(ಮಹಾರಾಷ್ಟ್ರ): ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ದುರಂತ ಸಂಭವಿಸಿದೆ. ಖಾಸಗಿ ಬಸ್​ ಮತ್ತು ಟ್ರಕ್​ ಮಧ್ಯೆ ಡಿಕ್ಕಿಯಾಗಿ 4 ಮಂದಿ ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ. ಕಾಟ್ರಾಜ್ ಘಾಟ್ ಬಳಿಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಇಂದು ನಸುಕಿನಜಾವ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಅಪಘಾತದ ಮಾಹಿತಿ ಪಡೆದ ಕಾಟ್ರಾಜ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಪ್ರಯಾಣಿಕರ ಬಸ್‌ ಕೊಲ್ಹಾಪುರದಿಂದ ಮುಂಬೈನ ಡೊಂಬಿವಿಲಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಹಿಂದಿನಿಂದ ಬಂದ ಟ್ರಕ್ ಬಸ್​ಗೆ ಡಿಕ್ಕಿ ಹೊಡಿದೆ. ಟ್ರಕ್‌ನ ಬ್ರೇಕ್ ಫೇಲ್ ಆಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಟ್ರಕ್‌ನ ಕ್ಯಾಬಿನ್ ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ಭಾರತಿ ವಿದ್ಯಾಪೀಠ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಪ್ರಯಾಣಿಕರು ಗಾಢ ನಿದ್ದೆಯಲ್ಲಿದಾಗ ಅವಘಡ ಸಂಭವಿಸಿದೆ. ಬಸ್​​ನಲ್ಲಿ ಒಟ್ಟು 21 ಮಂದಿ ಪ್ರಯಾಣಿಕರು ಓರ್ವ ಚಾಲಕ ಮತ್ತು ಓರ್ವ ಕ್ಲೀನರ್ ಇದ್ದರು. ಟ್ರಕ್​​ನಲ್ಲಿ ಚಾಲಕ ಸೇರಿ ಮೂರು ಮಂದಿ ಇದ್ದರು. ಅಪಘಾತದ ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದರು. ಗಾಯಗೊಂಡ 22 ಮಂದಿಯಲ್ಲಿ 19 ಮಂದಿ ಬಸ್ ಪ್ರಯಾಣಿಕರಾಗಿದ್ದರೆ, ಮೂವರು ಟ್ರಕ್‌ನಲ್ಲಿದ್ದವರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

7 ಮಂದಿ ದಾರುಣ ಸಾವು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಖಾಸಗಿ ಬಸ್​ ಮತ್ತು ಟ್ರಕ್​ ಮಧ್ಯೆ ಡಿಕ್ಕಿ ಸಂಭವಿಸಿ 7 ಮಂದಿ ಮೃತಪಟ್ಟ ದಾರುಣ ಘಟನೆ ಏ.21(ಶುಕ್ರವಾರ)ರಂದು ನಡೆದಿತ್ತು. ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್‌ನಗರ ಕಡೆಗೆ ತೆರಳಲು ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿತ್ತು. ಇದರಿಂದ ಬಸ್​ ಮೇಲೆ ಟ್ರಕ್​​ ಉರುಳಿಕೊಂಡು ಬಿದ್ದಿದೆ. ಬಸ್​ನಲ್ಲಿದ್ದ ಜನರ ಪೈಕಿ 7 ಮಂದಿ ಸ್ಥಳದಲ್ಲೇ ಅಸುನೀಗಿ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಘಟನೆಯ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಬಸ್​ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದರು.

ಇದನ್ನೂ ಓದಿ: ತಿರುವಿನಲ್ಲಿ ಡಿಕ್ಕಿಯಾಗಿ ಬಸ್​ ಮೇಲೆ ಉರುಳಿಬಿದ್ದ ಟ್ರಕ್​​: 7 ಮಂದಿ ದಾರುಣ ಸಾವು

ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ: ತೂಫಾನ್ ವಾಹನ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ-ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇತ್ತೀಚೆಗೆ ನಡೆದಿತ್ತು. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಮಂಗಳೂರು: ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.