ಕಂಧಮಾಲ(ಒಡಿಶಾ): ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿರುವ ಘಟನೆ ಫುಲ್ಬಾನಿ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಲಹಬಾದಿಯಲ್ಲಿ ನಡೆದಿದೆ. ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಕಾರಿನಲ್ಲಿದ್ದ ಪ್ರಯಾಣಿಕರು ಬಿಸಿಪಡದ ತಲಪಡವಿಗೆ ಗುಮ್ಮಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ಈ ವೇಳೆ ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಬೆರ್ಹಾಂಪುರ ಎಂಕೆಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್ ಬಂಧನ