ಕರೀಂನಗರ (ತೆಲಂಗಾಣ): ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ಕೂಲಿ ಕಾರ್ಮಿಕ ಮಹಿಳೆಯರ ಮೇಲೆ ಅಪ್ರಾಪ್ತ ಬಾಲಕನೊಬ್ಬ ಕಾರನ್ನು ಚಲಾಯಿಸಿಕೊಂಡು ಹೋದ ಪರಿಣಾಮ, ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವಿಗೀಡಾಗಿದ್ದಾರೆ.
ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಉಳಿದ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. 16 ವರ್ಷದ ಬಾಲಕ ವಾಹನ ಚಲಾಯಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಏಳು ಆರೋಪಿಗಳ ಬಂಧನ
ಕಾರು ಮಾಲೀಕ ರಾಜೇಂದ್ರ ಪ್ರಸಾದ್ ಮತ್ತು ಅವರ ಮಗ (ಅಪ್ರಾಪ್ತ) ಹಾಗೂ ಕಾರಿನಲ್ಲಿ ಇನ್ನಿಬ್ಬರು ಅಪ್ರಾಪ್ತರು ಇದ್ದಾಗ ಅಪಘಾತ ಸಂಭವಿಸಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಕರೀಂನಗರ ಸಿಪಿ ಸತ್ಯನಾರಾಯಣ ಮಾಹಿತಿ ನೀಡಿದ್ದಾರೆ.
ಘಟನೆ ವಿವರ: ಅಪ್ರಾಪ್ತ ಬಾಲಕ ತನ್ನ ಇಬ್ಬರು ಸ್ನೇಹಿತರೊಂದಿಗೆ ಪ್ರತಿದಿನ ಬೆಳಗ್ಗೆ ಕಾರಿನಲ್ಲಿ ಡ್ರೈವಿಂಗ್ ಹೋಗುತ್ತಿದ್ದ. ಇಂದು ಅವರು ಕಾರಿನಲ್ಲಿ ಕ್ರೀಡಾಂಗಣಕ್ಕೆ ಹೋಗುತ್ತಿದ್ದಾಗ ಲೇಬರ್ ಕಾಲೋನಿ ಹತ್ತಿರ ಹೋಗುತ್ತಿದ್ದಂತೆ, ಕಾರಿನ ನಿಯಂತ್ರಣ ತಪ್ಪಿದೆ. ಬ್ರೇಕ್ ಬದಲಿಗೆ ಆತ ಕಾಲನ್ನು ಕ್ಲಚ್ ಮೇಲೆ ಇಟ್ಟಿದ್ದಾನೆ. ಪರಿಣಾಮ ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ಕೂಲಿ ಕೆಲಸ ಮಾಡುವ ಮಹಿಳೆಯರತ್ತ ಕಾರು ನುಗ್ಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದ್ರೆ ರಾಜೇಂದ್ರ ಪ್ರಸಾದ್ ಪೊಲೀಸರಿಗೆ ಶರಣಾಗಿದ್ದರು. ಬಳಿಕ ಪೊಲೀಸರು ಅಪ್ರಾಪ್ತರನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕಾರನ್ನು ಅಪ್ರಾಪ್ತರು ಚಲಾಯಿಸುತ್ತಿದ್ದರು ಎಂಬುದು ಪೊಲೀಸರಿಗೆ ತಿಳಿದುಬಂದಿದೆ. ಅವರು ಮೂವರು ಅಪ್ರಾಪ್ತರೊಂದಿಗೆ ಕಾರಿನ ಮಾಲೀಕನನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಅಪ್ರಾಪ್ತರಿಗೆ ಕಾರು ನೀಡಿದ ಆರೋಪದಲ್ಲಿ ರಾಜೇಂದ್ರ ಪ್ರಸಾದ್ ಅವರನ್ನು ಬಂಧಿಸಲಾಗಿದೆ.