ETV Bharat / bharat

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಾಪಿ ಸೋದರ ಮಾವ - ನಾಲ್ಕು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪಾಪಿ ಸೋದರ ಮಾವ

ನಾಲ್ಕು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸೋದರ ಮಾವನೇ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

rape
rape
author img

By

Published : Feb 3, 2022, 10:26 AM IST

ರಾಜಸ್ಥಾನ್​/ಜಾಲೋರ್: ನಾಲ್ಕು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸೋದರ ಮಾವನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಆರೋಪಿ ನಾರಾಯಣ ಜಿಲ್ಲೆಯ ಲೇಟಾ ಗ್ರಾಮದ ನಿವಾಸಿಯಾಗಿದ್ದು, ಬಾಲಕಿಗೆ ಸೋದರ ಮಾವನಾಗಬೇಕು.

ಬುಧವಾರ ಸಂಬಂಧಿಕರ ಮನೆಗೆ ಬಂದ ಆರೋಪಿ, ಮಧ್ಯಾಹ್ನ ಬಾಲಕಿಯ ಕುಟುಂಬಸ್ಥರೊಂದಿಗೆ ಊಟ ಮುಗಿಸಿದ್ದಾನೆ. ನಂತರ ಬಾಲಕಿಯ ತಂದೆ, ಮನೆಯಲ್ಲಿ ಯಾವುದೋ ಕೆಲಸದಲ್ಲಿ ತೊಡಗಿದ್ದು, ತಾಯಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಮಾವನೊಂದಿಗೆ ಆಟವಾಡುತ್ತಿತ್ತು. ಸ್ವಲ್ಪ ಸಮಯದ ನಂತರ ಮಗು ಅಳುವುದು, ಕಿರುಚಾಡುವ ಶಬ್ದ ಕೇಳಿದ್ದು, ತಂದೆ ಒಳಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಈ ಸಂಬಂಧ ಸಂತ್ರಸ್ತೆಯ ಕುಟುಂಬಸ್ಥರು ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.