ಜಲಂಧರ್ (ಪಂಜಾಬ್): ಗಡಿ ಭದ್ರತಾ ಪಡೆ ಮತ್ತು ಪಂಜಾಬ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 40 ಕೆಜಿ ಹೆರಾಯಿನ್ ಹಾಗೂ ಉದ್ದನೆಯ ಪ್ಲಾಸ್ಟಿಕ್ ಕೊಳವೆಯನ್ನು ವಶಪಡಿಸಿಕೊಳ್ಳಲಾಗಿದೆ.
ಇಂಡೋ-ಪಾಕ್ ಗಡಿಭಾಗವಾದ ಪಂಜಾಬ್ನ ಜಲಂಧರ್ ಜಿಲ್ಲೆಯ ರಾಮದಾಸ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜ್‌ಗ್ರೇನ್ ಎಂಬ ಪ್ರದೇಶದಲ್ಲಿ ತಡರಾತ್ರಿ 3 ಗಂಟೆ ಸುಮಾರಿಗೆ ಅನುಮಾನಾಸ್ಪದವಾಗಿ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಕಂಡ ಬಿಎಸ್‌ಎಫ್ ಸಿಬ್ಬಂದಿ ಹಾಗೂ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕತ್ತಲೆಯ ಲಾಭ ಪಡೆದ ವ್ಯಕ್ತಿಗಳು ಪರಾರಿಯಾಗಿದ್ದಾರೆ. ಆದರೆ ಅವರ ಬಳಿಯಿದ್ದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ರೌಡಿ ಶೀಟರ್ ಕಾಲಿಗೆ ಗುಂಡೇಟು
ವಶಕ್ಕೆ ಪಡೆದ 40 ಕೆಜಿ ಹೆರಾಯಿನ್ ಮೌಲ್ಯ ಸುಮಾರು 200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬಿಎಸ್‌ಎಫ್ ಸಿಬ್ಬಂದಿ ಹಾಗೂ ಪೊಲೀಸರು ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.