ಮಧುರೈ(ತಮಿಳುನಾಡು): ದಾಖಲೆ ಇಲ್ಲದೆ ಅಕ್ರಮವಾಗಿ ಚಿನ್ನಸಾಗುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಮಧುರೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದ್ದು, ಬಂಧಿತರಿಂದ 42.5 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ದುಬೈನಿಂದ ಮಧುರೈ ಏರ್‌ಪೋರ್ಟ್‌ಗೆ ಬಂದಿಳಿದಾಗ ಕಸ್ಟಮ್ಸ್ ಅಧಿಕಾರಿಗಳು ಸಾಮಾನ್ಯ ಪರೀಕ್ಷೆಗೊಳಪಡಿಸಿದಾಗ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿದೆ. ಒಳ ಉಡುಪಿನಲ್ಲಿ ಚಿನ್ನವನ್ನು ತಂದಿದ್ದರು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.