ETV Bharat / bharat

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 5 ಮಂದಿ ಸಾವು, 7 ಮಂದಿಗೆ ಗಂಭೀರ ಗಾಯ

author img

By

Published : Jun 3, 2023, 9:10 PM IST

ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

5-dead-7-seriously-injured-by-raod-accident-in-bihar
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 5 ಮಂದಿ ಸಾವು, 7 ಮಂದಿಗೆ ಗಂಭೀರ ಗಾಯಾ

ಪೂರ್ನಿಯಾ (ಬಿಹಾರ): ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಾಗೊಂಡಿರುವ ಘಟನೆ ಪುರ್ನಿಯಾದ ಮರಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬೈಪಾಸ್‌ನಲ್ಲಿ ನಡೆದಿದೆ. ಗಾಯಾಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮವಾಗಿ ಕಾರಿನಲ್ಲಿದ್ದ 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಪೂರ್ನಿಯಾ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅರಾರಿಯಾದ ಜೋಕಿಹಾಟ್‌ನಿಂದ ಖಗರಿಯಾ ಜಿಲ್ಲೆಗೆ ಮದುವೆ ದಿಬ್ಬಣದ ಕಾರು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದಿಂದ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೃತರ ಸಂಬಂಧಿಕ ಅಬ್ದುಲ್ ಮಾತನಾಡಿ, "ಸ್ಕಾರ್ಪಿಯೋ ವಾಹನದ ಚಾಲಕನಿಗೆ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದಾರೆ'' ಎಂದು ತಿಳಿಸಿದರು.

ಘಟನೆ ಸಂಬಂಧ ಡಿಎಸ್ಪಿ ಪುಷ್ಕರ್ ಕುಮಾರ್ ಮಾತನಾಡಿ, "ರಸ್ತೆ ಅಪಘಾತದಲ್ಲಿ ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಲ್ಲಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಲಾಗುತ್ತದೆ ಎಂದರು.

ಇದನ್ನೂ ಓದಿ:ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, 900 ಮಂದಿಗೆ ಗಾಯ

ಹರಿಯಾಣದ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು: ಮತ್ತೊಂದೆಡೆ ಹರಿಯಾಣದ ಪಾಣಿಪತ್​ನ ಸನೌಲಿ ರಸ್ತೆಯಲ್ಲಿ ಟಾಟಾ ಏಸ್ ಮತ್ತು ಟ್ರಕ್​ ನಡುವೆ ಅಪಘಾತ ಸಂಭವಿಸಿ​ 4 ಜನ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಇಡಲಾಗಿದೆ.

ಅಪಘಾತಕ್ಕೆ ಒಳಗಾದ ಟಾಟಾ ಏಸ್ ವಾಹನಲ್ಲಿ ಸುಮಾರು 28 ಮಂದಿ ಪ್ರಯಾಣ ಮಾಡುತ್ತಿದ್ದರು. ಎಲ್ಲರೂ ಜಿಂದ್ ಜಿಲ್ಲೆಯ ಕಾಮಸ್ ಖೇಡಾ ಗ್ರಾಮದಿಂದ ಹರಿದ್ವಾರಕ್ಕೆ ಸ್ನಾನಕ್ಕೆಂದು ಹೋಗುತ್ತಿದ್ದರು. ಆದರೆ, ಎದುರಿನಿಂದ ವೇಗವಾಗಿ ಬಂದ ಯಮರೂಪಿ ಟ್ರಕ್​ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಗಂಭೀರvಆಗಿ ಗಾಯಗೊಂಡಿದ್ದಾರೆ. 12 ಗಾಯಾಳುಗಳನ್ನು ಪಾಣಿಪತ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಟ್ರಕ್ ಚಾಲಕ ಟ್ರಕ್‌ನೊಂದಿಗೆ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಟ್ರಕ್​ ಚಾಲಕನಿಗಾಗಿ ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.