ETV Bharat / bharat

ವರುಣಾರ್ಭಟಕ್ಕೆ ಕೇರಳ ತತ್ತರ.. ಮಳೆ ಕಾರಣಕ್ಕೆ ಐವರ ಸಾವು

ಕೇರಳದಲ್ಲಿ ಮಳೆ ವೇಗ ಪಡೆದುಕೊಂಡಿದೆ. ನಿನ್ನೆಯಿಂದ ವರುಣಾರ್ಭಟ ಜೋರಾಗಿದ್ದು, ಮಳೆ ಸಂಬಂಧಿ ಘಟನೆಗಳಲ್ಲಿ ಐವರು ಮೃತಪಟ್ಟಿರುವುದು ವರದಿಯಾಗಿದೆ.

5-dead-as-heavy-rain-lashes-kerala
ವರುಣಾರ್ಭಟಕ್ಕೆ ಕೇರಳ ತತ್ತರ
author img

By

Published : Aug 1, 2022, 11:29 AM IST

ತಿರುವನಂತಪುರಂ: ಕೇರಳದಲ್ಲಿ ವರುಣಾರ್ಭಟ ಜೋರಾಗಿದೆ. ನಿನ್ನೆಯಿಂದ ಸುರಿಯುತ್ತಿರುವ ಮಳೆಗೆ ಕನಿಷ್ಠ ಐವರು ಮೃತಪಟ್ಟಿರುವುದು ವರದಿಯಾಗಿದೆ. ಭಾನುವಾರ 2 ಸಾವುಗಳು ಸಂಭವಿಸಿದ್ದರೆ, ಇಂದು ಬಸ್ ಓವರ್‌ಟೇಕ್ ಮಾಡಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಉಕ್ಕಿ ಹರಿಯುವ ಕಾಲುವೆಗೆ ಬಿದ್ದು ಮೂವರು ಪ್ರಾಣ ತೆತ್ತಿದ್ದಾರೆ.

ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್​ ಅನ್ನು ಹಿಂದಿಕ್ಕುವ ಭರದಲ್ಲಿ ವೇಗವಾಗಿ ಸಾಗಿದ ಕಾರು ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಇದರಿಂದ ಕಾರಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಓರ್ವನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾನೆ.

ಇನ್ನೂ 4 ದಿನ ಭಾರೀ ಮಳೆ: ಕೇರಳದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ನೀಡಲಾಗಿದೆ. ಅತಿಯಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಓದಿ: ಮಳೆಹಾನಿ, ಮಂಕಿಪಾಕ್ಸ್ ಕುರಿತು ನಾಳೆ ಅಧಿಕಾರಿಗಳ ಸಭೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.