ETV Bharat / bharat

ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು: ಒಂದೇ ಕುಟುಂಬದ ಐವರ ಸಾವು, ಬದುಕುಳಿದ ಪುಟ್ಟ ಮಗು

ನಿಂತಿದ್ದ ಟ್ರಕ್​ವೊಂದಕ್ಕೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ.

5 died in road accident in basti
5 died in road accident in basti
author img

By

Published : Aug 12, 2021, 4:29 PM IST

ಲಖನೌ(ಉತ್ತರ ಪ್ರದೇಶ): ನಿಂತಿದ್ದ ಟ್ರಕ್​​ವೊಂದಕ್ಕೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ಘಟನೆಯಲ್ಲಿ ಡ್ರೈವರ್​​ ಸ್ಥಿತಿ ಗಂಭೀರವಾಗಿದ್ದು, ಐದು ವರ್ಷದ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಸ್ತಿ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್​ವೊಂದಕ್ಕೆ ಕಾರು ರಭಸವಾಗಿ ಬಂದು ಡಿಕ್ಕಿ ಹೊಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಡ್ರೈವರ್​ ಗಂಭೀರವಾಗಿ ಗಾಯಗೊಂಡಿದ್ದು, ಪುಟ್ಟ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದೆ ಎಂದು ಸರ್ಕಲ್​ ಆಫೀಸರ್​ ಕುಲ್ವಾರ್​ ತಿಳಿಸಿದ್ದಾರೆ.

ಕುಟುಂಬವೊಂದು ಜಾರ್ಖಂಡ್​ನೊಂದ ಲಖೌನ್​ಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದ್ದು, ಘಟನೆಯಿಂದಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಗೊಂಡಿರುವ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿರಿ: ಗೋವಾದ ಬೀಚ್​ನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ಜಾರ್ಖಂಡ್​ ನಿವಾಸಿ ಅಬ್ದುಲ್​ ಅಜೀಜ್​ ಕುಟುಂಬ ಬುಧವಾರ ರಾತ್ರಿ ಕುಟುಂಬದೊಂದಿಗೆ ಲಖನೌದಿಂದ ಜಾರ್ಖಂಡ್​ಗೆ ಪ್ರಯಾಣ ಮಾಡುತ್ತಿದ್ದರು. ಬೆಳಗ್ಗಿನ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಅಬ್ದುಲ್​ ಅಜೀಜ್​, ನರ್ಗಿಸ್​ ತಬಸ್ಸುಮ್​, ಅನಾಮ್​, ಸಿಜ್ರಾ ಸೇರಿದಂತೆ ಐವರು ಸಾವನ್ನಪ್ಪಿದ್ದು, ಅಭಿಷೇಕ್​ ಹಾಗೂ ಐದು ವರ್ಷದ ಬಾಲಕಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.