ಜೌನ್ಪುರ (ಉತ್ತರಪ್ರದೇಶ): ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮೃತರಿಗೆ ಸಿಎಂ ಯೋಗಿ ಅದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಅಲ್ಲದೆ, ಗಾಯಾಗಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:44 ವರ್ಷದ ಮಹಿಳೆ ಮೇಲೆ ಅತ್ಯಾಚಾರ... ಪಂಜಾಬ್ MLA ವಿರುದ್ಧ ದೂರು