ETV Bharat / bharat

80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ: ಕೇಂದ್ರದ ಮಹತ್ವದ ಘೋಷಣೆ

ದೇಶದಲ್ಲಿ ಡೆಡ್ಲಿ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಇದೀಗ ಬಡವರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಉಚಿತವಾಗಿ ಆಹಾರ ಧಾನ್ಯ ನೀಡುವುದಾಗಿ ಘೋಷಣೆ ಮಾಡಿದೆ.

food grains
food grains
author img

By

Published : Apr 23, 2021, 4:02 PM IST

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ನಿತ್ಯ ಅನೇಕರು ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಇದರ ಮಧ್ಯೆ ಕೆಲವೊಂದು ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆಯಾಗಿರುವ ಕಾರಣ ಕೂಲಿ ಕಾರ್ಮಿಕರು, ಬಡವರು ತೊಂದರೆ ಅನುಭವಿಸುವಂತಾಗಿದೆ. ಇದರ ಮಧ್ಯೆ ಕೇಂದ್ರ ಮಹತ್ವದ ಯೋಜನೆ ಘೋಷಣೆ ಮಾಡಿದೆ.

  • Government of India to provide free foodgrains under PM Garib Kalyan Ann Yojana for May & June 2021. 5 kg free food grains to be provided to around 80 crore beneficiaries. Government of India would spend more than Rs 26,000 crore on this initiative: Government of India

    — ANI (@ANI) April 23, 2021 " class="align-text-top noRightClick twitterSection" data=" ">

ಪ್ರಧಾನ ಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್​ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಘೋಷಣೆ ಮಾಡಿದೆ. ಈ ಯೋಜನೆಗೋಸ್ಕರ ಭಾರತ ಸರ್ಕಾರ 26,000 ಕೋಟಿ ರೂ.ಗಿಂತಲೂ ಅಧಿಕ ಹಣ ಖರ್ಚು ಮಾಡುತ್ತಿದೆ.

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಮನೆಯಿಂದ ಹೊರಬರಲು ತೊಂದರೆ ಅನುಭವಿಸುವಂತಾಗಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ಈ ಘೋಷಣೆ ಮಾಡಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಬಡ ವರ್ಗದವರಿಗೆ ಉಚಿತವಾಗಿ ಪಡಿತರ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಣೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.