ETV Bharat / bharat

ಸಹೋದರ-ಸಹೋದರಿ ಸೇರಿ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವು: 20 ಮಂದಿಗೆ ಗಾಯ

ಮಧ್ಯಪ್ರದೇಶದ ರಾಜ್‌ಗಢ ಮತ್ತು ಪನ್ನಾ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಸಹೋದರ-ಸಹೋದರಿ ಸೇರಿ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

Madhya Pradesh road accident
ಮಧ್ಯಪ್ರದೇಶ ರಸ್ತೆ ಅಪಘಾತ
author img

By

Published : Dec 5, 2021, 3:17 PM IST

ರಾಜ್‌ಗಢ/ಪನ್ನಾ: ಮಧ್ಯಪ್ರದೇಶದ ರಾಜ್‌ಗಢ ಮತ್ತು ಪನ್ನಾ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಜ್‌ಗಢದಲ್ಲಿ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ವೇಗವಾಗಿ ಬಂದ ಟ್ರಕ್​​ವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರ-ಸಹೋದರಿ ಮತ್ತು ಇನ್ನೊಬ್ಬ ಹುಡುಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರಕ್​​ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪನ್ನಾದಲ್ಲಿ ಕೂಡ ನಿನ್ನೆ ರಾತ್ರಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಇವೆರಲ್ಲ ಕೂಲಿ ಕೆಲಸ ಮುಗಿಸಿ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.