ETV Bharat / bharat

ರಾಹುಲ್​ ಗಾಂಧಿಗೆ ಇಡಿ ಡ್ರಿಲ್​: ಕಾಂಗ್ರೆಸ್​ನ ಐದು ಸಂಸದರು ಸೇರಿ 240ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ​

ರಾಹುಲ್​ ಗಾಂಧಿಗೆ ಇಡಿ ಡ್ರಿಲ್​ ವೇಳೆ ಕಾಂಗ್ರೆಸ್ ಪಕ್ಷ ಸೃಷ್ಟಿಸಿದ ಗಲಾಟೆಯಲ್ಲಿ ಐದು ಸಂಸದರನ್ನು ಸೇರಿ 240ಕ್ಕೂ ಹೆಚ್ಚು ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

party workers detained during Congress protest, Congress protest in Delhi, National Herald case,  ED grilling of Rahul Gandhi in New Delhi, ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾರ್ಯಕರ್ತರ ಬಂಧನ, ನ್ಯಾಷನಲ್ ಹೆರಾಲ್ಡ್ ಪ್ರಕರಣ, ನವದೆಹಲಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಇಡಿ ಡ್ರಿಲ್​,
author img

By

Published : Jun 16, 2022, 7:31 AM IST

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಚಾರಣೆಯನ್ನು ಇಡಿ ನಡೆಸುತ್ತಿದ್ದು, ಇದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಹೈಡ್ರಾಮ ಸೃಷ್ಟಿಸಿತ್ತು. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡಸಿದ್ದ ಕಾಂಗ್ರೆಸ್​ ಪ್ರತಿಭಟನೆಯಲ್ಲಿ ಐವರು ಸಂಸತ್ ಸದಸ್ಯರು ಸೇರಿದಂತೆ 240 ಕಾಂಗ್ರೆಸ್ ಕಾರ್ಯಕರ್ತರನ್ನು ಬುಧವಾರ ಬಂಧಿಸಲಾಗಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಾನೂನು ನಿರ್ದೇಶನಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾಲ್ವರು ಲೋಕಸಭಾ ಸಂಸದರು ಮತ್ತು ಒಬ್ಬ ರಾಜ್ಯಸಭಾ ಸದಸ್ಯ ಸೇರಿದಂತೆ ದೆಹಲಿ ಪೊಲೀಸ್ ಕಾಯಿದೆ ಸೆಕ್ಷನ್ 65 ರ ಅಡಿ ಒಟ್ಟು 240 ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ಸಾಗರ್ ಪ್ರೀತ್ ಹೂಡಾ ಹೇಳಿದ್ದಾರೆ.

ಸೋಮವಾರದಿಂದ ಜಂತರ್ ಮಂತರ್​ನಲ್ಲಿ ಪ್ರಾರಂಭ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಗಲಭೆಗಳನ್ನು ಸೃಷ್ಟಿಸಲು ಪದೇ ಪದೆ ಪ್ರಯತ್ನಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೂಡಾ ಹೇಳಿದರು.

ಓದಿ: ನವದೆಹಲಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಸಚಿನ್​ ಪೈಲಟ್​ ಪೊಲೀಸ್‌ ವಶಕ್ಕೆ

ನಿನ್ನೆ ಕಾಂಗ್ರೆಸ್‌ನ ಕೆಲವು ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಕಚೇರಿಯಿಂದ ಪ್ರತಿಭಟನೆ ಮೆರವಣಿಗೆ ನಡೆಸಲು ಪ್ರಯತ್ನಿಸಿದರು. ಆದರೆ ಪಕ್ಷದ ಕೆಲವು ಕಾರ್ಯಕರ್ತರು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ತಳ್ಳಿ ಹಲ್ಲೆ ನಡೆಸಿದರು. ಅಷ್ಟೇ ಅಲ್ಲ ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾನಿಗೊಳಿಸಿದರು. ಇದು ಅವ್ಯವಸ್ಥೆಗೆ ಕಾರಣವಾಯಿತು ಎಂದು ವಿಶೇಷ ಸಿಪಿ ಹೇಳಿದರು.

ಕೆಲವು ಕಿಡಿಗೇಡಿಗಳು ಕ್ಯೂ ಪಾಯಿಂಟ್ ಬಳಿ ಟೈರ್‌ಗಳನ್ನು ಸುಟ್ಟುಹಾಕಿದ್ದಾರೆ. ಇದು ಸಾರ್ವಜನಿಕರಲ್ಲಿ ಭಯವನ್ನು ಉಂಟುಮಾಡಿತು. ಇದರಿಂದಾಗಿ ಜನನಿಬಿಡ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಲ್ಬಣಗೊಂಡಿತು. ಪಕ್ಷದ ಮುಖಂಡರು ಮತ್ತು ಬೆಂಬಲಿಗರ ಇಂತಹ ಕಾನೂನುಬಾಹಿರ ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.