ETV Bharat / bharat

ಎರಡು ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ.. ಭೀಕರ ಅಪಘಾತದಲ್ಲಿ ಐವರು ಸಾವು, ಸಿಎಂ ಸಂತಾಪ - ಸ್ಥಳೀಯರು ರಕ್ಷಣಾ ಕಾರ್ಯಾಚರಣೆ

ತಮಿಳನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಸುಮಾರು ಐದು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

5 people died  70 people injured  collision between two private buses  collision between two private buses in TamilNadu  ಎರಡು ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ  ಭೀಕರ ಅಪಘಾತದಲ್ಲಿ ಐವರು ಸಾವು  ಸುಮಾರು ಐದು ಜನ ಸಾವನ್ನಪ್ಪಿರುವುದಾಗಿ ವರದಿ  ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ  ಖಾಸಗಿ ಬಸ್ ಚಾಲಕರು ಸ್ಥಳದಲ್ಲೇ ಮೃತ  ಸ್ಥಳೀಯರು ರಕ್ಷಣಾ ಕಾರ್ಯಾಚರಣೆ  ಸ್ಥಳಕ್ಕೆ ದೌಡಾಯಿಸಿದ ಪೊಲೀಸರು
ಎರಡು ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ
author img

By

Published : Jun 19, 2023, 2:29 PM IST

ಕಡಲೂರು, ತಮಿಳುನಾಡು: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿನ ಮೇಲ್ಪಟ್ಟಾಂಬಕ್ಕಂ ಗ್ರಾಮದಲ್ಲಿ ಇಂದು ಬೆಳಗ್ಗೆ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಡಲೂರು ಕೇಂದ್ರ ಬಸ್ ನಿಲ್ದಾಣದಿಂದ ತಿರುವಣ್ಣಾಮಲೈಗೆ ತೆರಳುತ್ತಿದ್ದ ಖಾಸಗಿ ಬಸ್ ಮೇಲ್ಪಟ್ಟಾಂಬಕ್ಕಂ ಬಳಿ ಸಾಗುತ್ತಿತ್ತು. ಆಗ ಪನ್ರುತಿ ಕಡೆಯಿಂದ ಬರುತ್ತಿದ್ದ ದುರ್ಗಾ ಎಂಬ ಖಾಸಗಿ ಬಸ್​ ಮಧ್ಯೆ ಈ ಅಪಘಾತ ಸಂಭವಿಸಿದೆ.

  • #WATCH | Tamil Nadu | Around 70 people injured in a collision between two private buses in Melpattampakkam of Cuddalore district. The injured have been taken to Cuddalore government hospital. Further details awaited. pic.twitter.com/TX9H5pA1AF

    — ANI (@ANI) June 19, 2023 " class="align-text-top noRightClick twitterSection" data=" ">

ಈ ಭೀಕರ ಅಪಘಾತದಲ್ಲಿ ಇಬ್ಬರು ಖಾಸಗಿ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಐದಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುದುವಿನ ಜಿಪಂ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಚಿಕಿತ್ಸೆಗಾಗಿ ಪುದುಚೇರಿಗೆ ತೆರಳಿದ್ದ ಮಹಿಳೆಯೊಬ್ಬರು ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಐದಕ್ಕೆ ಏರಿದೆ.

ಬಸ್​ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸುದ್ದಿ ತಿಳಿದಾಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಂಬ್ಯುಲೆನ್ಸ್​ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಬಳಿಕ ಅಪಘಾತದ ವಾಹನದಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಪನ್ರುತಿ ಕಡೆಯಿಂದ ಬರುತ್ತಿದ್ದ ದುರ್ಗಾ ಎಂಬ ಖಾಸಗಿ ಬಸ್​ನ ಟೈರ್​ ಬ್ಲಾಸ್ಟ್​ ಆಗಿದೆ. ಆಗ ಎದುರಿಗೆ ಬರುತ್ತಿದ್ದ ಕಡಲೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತಿದ್ದ ಖಾಸಗಿ ಬಸ್​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆ ಮೂಲಕ ತಿಳಿದು ಬಂದಿದೆ. ರಸ್ತೆಯಲ್ಲಿ ಅಪಘಾತಗೊಂಡ ಬಸ್​ಗಳನ್ನು ಕ್ರೇನ್​ ಸಹಾಯದಿಂದ ತೆರವುಗೊಳಿಸಲಾಗಿದೆ. ಈ ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಇನ್ನಷ್ಟು ಮಾಹಿತಿ ನೀಡಲಿದ್ದಾರೆ.

ಇನ್ನು ಸುದ್ದಿ ತಿಳಿದ ಕಡಲೂರು ಜಿಲ್ಲಾಧಿಕಾರಿ ಅರುಣ್ ತಂಬುರಾಜ್, ಪೊಲೀಸ್ ವರಿಷ್ಠಾಧಿಕಾರಿ ರಾಜಾರಾಮನ್ ಸೇರಿದಂತೆ ಮತ್ತಿತರರು ಕಡಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸಾ ಕಾರ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಮುಖ್ಯಮಂತ್ರಿ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.

ಅಪಘಾತದ ದುಃಖದ ಸುದ್ದಿ ಕೇಳಿ ತುಂಬಾ ನೋವಾಯಿತು. ಘಟನೆಯ ಬಗ್ಗೆ ತಿಳಿದ ತಕ್ಷಣ ಕಡಲೂರು ಜಿಲ್ಲಾಧಿಕಾರಿಯನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಅಪಘಾತ ನಡೆದ ಸ್ಥಳಕ್ಕೆ ತೆರಳಿ ಅಗತ್ಯ ರಕ್ಷಣಾ ಕಾರ್ಯಾಚರಣೆ ಹಾಗೂ ವೈದ್ಯಕೀಯ ನೆರವು ಆದಷ್ಟು ಬೇಗ ಒದಗಿಸುವಂತೆ ಸೂಚಿಸಿದ್ದೇನೆ. ಅಲ್ಲದೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಎಂ.ಆರ್.ಕೆ. ಪನ್ನೀರಸೆಲ್ವಂ, ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿವಿ ಗಣೇಶನ್ ಅವರು ಆಸ್ಪತ್ರೆಗೆ ಖುದ್ದು ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡವರಿಗೆ ವಿಶೇಷ ಚಿಕಿತ್ಸೆ ನೀಡುವಂತೆ ನೋಡಿಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಟ್ಟೀಟ್​ ಮಾಡಿದ್ದಾರೆ.

ಈ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಮತ್ತು ಅವರ ಸಂಬಂಧಿಕರಿಗೆ ನನ್ನ ತೀವ್ರ ಸಂತಾಪ. ಮೃತರ ಕುಟುಂಬಗಳಿಗೆ ತಲಾ ರೂ.2 ಲಕ್ಷ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ರೂ.50,000 ಪರಿಹಾರ ನೀಡಲು ಆದೇಶಿಸಿದ್ದೇನೆ. ಆಸ್ಪತ್ರೆಗೆ ಹಾಗೂ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 25,000 ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಅವರು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಓದಿ: ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.