ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಥಿಯೇಟರ್, ಮಲ್ಟಿಫ್ಲೆಕ್ಸ್, ಕಚೇರಿ ಆವರಣ, ಹೋಟೆಲ್, ರೆಸ್ಟೋರೆಂಟ್ ಹಾಗು ಆಸ್ಪತ್ರೆಗಳಲ್ಲಿ ಪಾರ್ಕಿಂಗ್ ಸ್ಥಳದ ಶೇ 5ರಷ್ಟನ್ನು ಎಲೆಕ್ಟ್ರಿಕ್ ವಾಹನಗಳಿಗೆ ಮೀಸಲಿಡಬೇಕೆಂದು ನಿರ್ಧರಿಸಿದೆ.
ಪ್ರಮುಖವಾಗಿ ನೂರಕ್ಕೂ ಹೆಚ್ಚು ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸುವ ಪಾರ್ಕಿಂಗ್ ಸ್ಥಳಗಳಲ್ಲಿ ಇದು ಕಡ್ಡಾಯವಾಗಲಿದ್ದು, ದೆಹಲಿ ಸರ್ಕಾರ ಈ ಕುರಿತು ಆದೇಶವೊಂದನ್ನು ಈಗಾಗಲೇ ಹೊರಡಿಸಿದೆ.
ದೆಹಲಿ ಸರ್ಕಾರದ ಇಂಧನ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ಶೇಕಡಾ 5ರಷ್ಟು ವಾಹನ ನಿಲುಗಡೆ ಸಾಮರ್ಥ್ಯವನ್ನು ಎಲೆಕ್ಟ್ರಿಕ್ ವಾಹನಗಳಿಗೆ ಕಾಯ್ದಿರಿಸುವುದರ ಜೊತೆಗೆ, ನಿಧಾನಗತಿಯ ವಿದ್ಯುತ್ ಚಾರ್ಜಿಂಗ್ ಪಾಯಿಂಟ್‌ಗಳ ಸೌಲಭ್ಯವನ್ನೂ ಪಾರ್ಕಿಂಗ್ ಸ್ಥಳದಲ್ಲಿ ಒದಗಿಸಬೇಕೆಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಟೂಲ್ಕಿಟ್ ಕೇಸ್: ಶುಭಂಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಕೋರ್ಟ್
ನೂತನ ಎಲೆಕ್ಟ್ರಿಕ್ ವಾಹನಗಳ ನೀತಿ ಅನುಸಾರ ದೆಹಲಿಯ ಎಲ್ಲಾ ವಾಣಿಜ್ಯ ಮಳಿಗೆಗಳು ಈ ಸೂಚನೆಯನ್ನು ಪಾಲಿಸಬೇಕಾಗಿದೆ. ಒಂದು ಚಾರ್ಜಿಂಗ್ ಪಾಯಿಂಟ್ ಅಳವಡಿಸಿಕೊಳ್ಳಲು ಸುಮಾರು 6 ಸಾವಿರ ರೂಪಾಯಿವರೆಗೆ ಸಬ್ಸಿಡಿ ಕೂಡಾ ಸರ್ಕಾರ ನೀಡಲಾಗುತ್ತದೆ.
ಈ ವರ್ಷದ ಅಂತ್ಯದವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ಗಳನ್ನು ನಿರ್ಮಿಸುವ ಗುರಿಯನ್ನು ದೆಹಲಿ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಪೆಟ್ರೋಲ್,ಡಿಸೇಲ್ ಬಳಕೆಗ ಕಡಿವಾಣ ಹಾಕಲು ಪ್ರಯತ್ನಿಸುತ್ತಿದೆ.