ETV Bharat / bharat

ಈಗಲೇ ರಂಗೇರಿದ ಲೋಕಸಭೆ ಚುನಾವಣೆ ಕಣ: ಇಂದು ದೆಹಲಿಯಲ್ಲಿ ಮಹತ್ವದ ಸಭೆ, 50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಭಾಗಿ!

author img

By

Published : Aug 2, 2023, 7:20 AM IST

Updated : Aug 2, 2023, 10:20 AM IST

ಲೋಕಸಭೆ ಚುನಾವಣೆ 2024 ಕಾವು ಜೋರಗಿದೆ. ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು 50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದು, ಚುನಾವಣೆ ಬಗ್ಗೆ ಕಾರ್ಯತಂತ್ರ ರೂಪಿಸಲಿದ್ದಾರೆ.

50 Cong leaders  ministers from Karnataka to meet party brass  meet party brass in Delhi  discuss plan for LS polls  ರಂಗೇರಿದ ಲೋಕಸಭೆ ಚುನಾವಣೆ  ಇಂದು ದೆಹಲಿಯಲ್ಲಿ ಮಹತ್ವದ ಸಭೆ  50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಭಾಗಿ  ಲೋಕಸಭೆ ಚುನಾವಣೆ 2024 ಕಾವು  ದೆಹಲಿಯಲ್ಲಿ ಮಹತ್ವದ ಸಭೆ  2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ  50 ರಾಜ್ಯ ಕಾಂಗ್ರೆಸ್ ನಾಯಕರು  ಕಾಂಗ್ರೆಸ್ ನಾಯಕರು ಮತ್ತು ಸಚಿವರು
ರಂಗೇರಿದ ಲೋಕಸಭೆ ಚುನಾವಣೆ
ಇಂದು ದೆಹಲಿಯಲ್ಲಿ ಮಹತ್ವದ ಸಭೆ

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸುಮಾರು 50 ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಇಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೆಂಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ಭಾಗವಹಿಸುವ ಸಾಧ್ಯತೆಯಿದೆ. ಕರ್ನಾಟಕ ಡಿಸಿಎಂ ಶಿವಕುಮಾರ್ ಅವರು ದೆಹಲಿಗೆ ಆಗಮಿಸಿದರು. ದೆಹಲಿ ತಲುಪಿದ ನಂತರ ಮಂಗಳವಾರ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ದೆಹಲಿಗೆ ತೆರಳುವ ಮುನ್ನ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್, ರಾಜ್ಯದ ಸಮಸ್ಯೆಗಳು ಮತ್ತು ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿರುವ ಅಸಮಾಧಾನದ ನಡುವೆಯೇ ಪಕ್ಷದ ಉನ್ನತ ನಾಯಕರೊಂದಿಗಿನ ಈ ಸಭೆಯನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ.

ಆಡಳಿತ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿರುವ ಹಿನ್ನೆಲೆ ಕಾಂಗ್ರೆಸ್ ವರಿಷ್ಠರೊಂದಿಗಿನ ಸಭೆ ಮಹತ್ವದ್ದಾಗಿದ್ದು, ಸುಮಾರು 30 ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಕಾರ್ಯ ಚಟುವಟಿಕೆಗಳನ್ನು ಅನುಷ್ಠಾನಗೊಳಿಸದಿರುವ ಬಗ್ಗೆ ಕೆಲವು ಮಂತ್ರಿಗಳು ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ಇಂದು ದೆಹಲಿಯಲ್ಲಿ ಮಹತ್ವದ ಸಭೆ : ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ‘ಬುಧವಾರ ದೆಹಲಿಯಲ್ಲಿ ಸಭೆ ಇದೆ. ಅಲ್ಲಿ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಪಕ್ಷದ ಕೆಲಸಗಳ ಜೊತೆಗೆ ಸರ್ಕಾರಿ ಕೆಲಸವೂ ಇದೆ. ಹಾಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ರಾಜ್ಯ ಸಚಿವರು, ಮುಖಂಡರ ಸಭೆ ನಡೆಸಲಾಗುತ್ತಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಹಿತದೃಷ್ಟಿಯಿಂದ ಏನು ಮಾಡಬೇಕು ಎಂಬುದನ್ನು ಚರ್ಚಿಸಿ ಕಾರ್ಯತಂತ್ರ ರೂಪಿಸಬೇಕಿದೆ ಎಂದರು.

ಸಭೆಗೆ ಸಚಿವರು ಹಾಗೂ ಕೆಲ ಶಾಸಕರು ಮಾತ್ರವಲ್ಲದೇ ಸುಮಾರು 8-10 ಮಂದಿ ಹಿರಿಯ ನಾಯಕರನ್ನು ಕೂಡ ಕರೆಯಲಾಗಿದೆ. ಇದಲ್ಲದೇ ಸಂಸದರಿಗೂ ಆಹ್ವಾನ ನೀಡಲಾಗಿದೆ. ಒಟ್ಟು 50 ಮಂದಿ ಸದಸ್ಯರು ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ.

ಹಲವಾರು ಆಡಳಿತ ಪಕ್ಷದ ಶಾಸಕರು ಅಸಮಾಧಾನಗೊಂಡಿದ್ದಾರೆ ಮತ್ತು ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ವರ್ಗಾವಣೆ (ಸರ್ಕಾರಿ ನೌಕರರ) ಬಗ್ಗೆ ನಿರ್ಧರಿಸುವ ಅಧಿಕಾರ ನೀಡಲಾಗಿಲ್ಲ ಎಂದು ದೂರಿದ್ದಾರೆ. ಕೆಲವು ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡಿಕೆಶಿ, ತಮಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.

ಇದರ ಬೆನ್ನಲ್ಲೇ ಮುಖ್ಯಮಂತ್ರಿಯವರು ಕಳೆದ ವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿದ್ದರು. ಅಲ್ಲಿ ಕೆಲವು ಶಾಸಕರ ನಡವಳಿಕೆ ಮತ್ತು ಕೆಲವು ಸಚಿವರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಪಕ್ಷದ ನಡುವೆ ಉತ್ತಮ ಸಂಪರ್ಕಕ್ಕಾಗಿ ಸಮನ್ವಯ ಸಮಿತಿಯ ಅಗತ್ಯತೆಯ ಬಗ್ಗೆ ವರದಿಗಳಿವೆ. ಆದರೆ ಇದನ್ನು ರಾಜ್ಯ ಕಾಂಗ್ರೆಸ್ ಖಚಿತಪಡಿಸಿಲ್ಲ. ಇನ್ನು ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಜ್ಯ ಸರ್ಕಾರದ ಹಲವು ಸಚಿವರು ಆಡಳಿತ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ದೆಹಲಿಯತ್ತ ಸಿಎಂ, ಸಚಿವರು: ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 20ಕ್ಕೂ ಹೆಚ್ಚು ಸಚಿವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ 9.45 ಕ್ಕೆ ವಿಸ್ತಾರ ವಿಮಾನದಲ್ಲಿ ದೆಹಲಿಗೆ ಹೊರಟರು. ಸಿಎಂ ಜೊತೆ ಸಚಿವರಾದ ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ‌, ಬೈರತಿ ಸುರೇಶ್​​ ಹಾಗೂ ಕೃಷ್ಣಬೈರೇಗೌಡ ಕೂಡ ದೆಹಲಿಗೆ ಹೊರಟರು. ಸಂಜೆ 5 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ.

ಓದಿ: ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆ ವರಿಷ್ಠರ ಜೊತೆ ದೆಹಲಿಯಲ್ಲಿ ಸಭೆ, 50 ಕೈ ನಾಯಕರ ಭೇಟಿ: ಡಿ ಕೆ ಶಿವಕುಮಾರ್​

Last Updated : Aug 2, 2023, 10:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.