ಭುವನೇಶ್ವರ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾವಿಗೀಡಾಗುವ ಅಂಗನವಾಡಿ ಕಾರ್ಮಿಕರು ಮತ್ತು ಮೇಲ್ವಿಚಾರಕರ ಕುಟುಂಬಕ್ಕೆ 50 ಲಕ್ಷ ರೂ. ಸಹಾಯಧನವನ್ನು ಒಡಿಶಾ ಸರ್ಕಾರ ಘೋಷಿಸಿದೆ.
ಈ ಸಂಬಂಧ ಇಂದು ಸರ್ಕಾರ ಆದೇಶ ಹೊರಡಿಸಿದ್ದು, ಕೋವಿಡ್ ಕರ್ತವ್ಯದಲ್ಲಿದ್ದಾಗ ಅನಾಹುತ ಸಂಭವಿಸಿದರೆ ಅವರ ಕುಟುಂಬಕ್ಕೆ ಈ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.
ಸರ್ಕಾರವು ಮೇ 24 ರಿಂದ ಆಗಸ್ಟ್ 31ರ ವರೆಗೆ ಮನೆ ಮನೆಗೆ ತೆರಳಿ ಕೋವಿಡ್ ಸಮೀಕ್ಷೆ ನಡೆಸಬೇಕೆಂದು ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದೆ.