ಬದೌನ್ (ಉತ್ತರ ಪ್ರದೇಶ): 50 ವರ್ಷದ ಅಂಗನವಾಡಿ ಕಾರ್ಯಕರ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬದೌನ್ ಜಿಲ್ಲೆಯ ಉಘೈಟಿಯಲ್ಲಿ ನಡೆದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಎಸ್ಎಸ್ಪಿ ಸಂಕಲ್ಪ್ ಶರ್ಮಾ, ಉಘೈಟಿ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಹಾಗೂ ಸಂಬಂಧಿಕರ ದೂರಿನ ಆಧಾರದ ಮೇಲೆ ಸೆಕ್ಷನ್ 376ರ ಅಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.