ETV Bharat / bharat

50 ವರ್ಷದ ಕಾಮುಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ​, ಹೆದರಿ ಆಸ್ಪತ್ರೆಗೆ ದಾಖಲಿಸಿದ!

ಕಾಮುಕ ವ್ಯಕ್ತಿಯೋರ್ವ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Minor Gang rape
Minor Gang rape
author img

By

Published : Apr 21, 2022, 3:33 PM IST

ವನಪರ್ತಿ(ತೆಲಂಗಾಣ): 50 ವರ್ಷದ ವ್ಯಕ್ತಿಯೊಬ್ಬ 8 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದು, ಈ ವೇಳೆ ಬಾಲಕಿಗೆ ತೀವ್ರ ರಕ್ತಸ್ರಾವವಾಗಿದೆ. ಇದರಿಂದ ಹೆದರಿದ ಆರೋಪಿ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ತೆಲಂಗಾಣದ ವನಪರ್ತಿ ಜಿಲ್ಲೆಯ ಮದನಪುರಂ ವಲಯದಲ್ಲಿ ಘಟನೆ ನಡೆದಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ಬಳಿಕ ಮಗುವಿನ ಖಾಸಗಿ ಅಂಗದಲ್ಲಿ ರಕ್ತಸ್ರಾವವಾಗಿದ್ದು, ಭಯದಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ವೈದ್ಯರು ಮಾಹಿತಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಎಸ್​​ಐ ಮಂಜುನಾಥ್​ರೆಡ್ಡಿ ಮಾತನಾಡಿದ್ದು, ವನಪರ್ತಿಯ ರಾಮನ್​ಪಾಡ್ ರೈಲ್ವೆ ಹಳಿ ಮೇಲೆ ವಿದ್ಯುದ್ದೀಕರಣ ಕಾಮಗಾರಿಗೋಸ್ಕರ ಛತ್ತೀಸ್​ಗಢದಿಂದ 8 ವರ್ಷದ ಬಾಲಕಿ ಸಮೇತ ಅನೇಕರು ಬಂದಿದ್ದಾರೆ. ಇದರಲ್ಲಿ ಪಶ್ಚಿಮ ಬಂಗಾಳದ ಶೇಖ್ ಮಚ್ಚನ್​​(50) ಕೂಡ ಆಗಮಿಸಿದ್ದಾರೆ. ಇವರೆಲ್ಲರೂ ಒಟ್ಟಿಗೆ ವಾಸ ಮಾಡ್ತಿದ್ದಾರೆ.

ಇದನ್ನೂ ಓದಿ: ಮದುವೆಗೆ ಹಣವಿಲ್ಲ ಎಂಬ ಕಾರಣಕ್ಕೆ ಮಗಳ ಕೊಲೆಗೈದ ತಂದೆ!

ಘಟನೆಯ ಮತ್ತಷ್ಟು ವಿವರ: ಬುಧವಾರ ಬೆಳಗ್ಗೆ ಬಾಲಕಿಯ ಪೋಷಕರು ಕೆಲಸಕ್ಕೆಂದು ಹೋಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಮಚ್ಚನ್​ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದರ ಬೆನ್ನಲ್ಲೇ ಆಕೆಗೆ ತೀವ್ರ ರಕ್ತಸ್ರಾವವಾಗಿದೆ. ಹೀಗಾಗಿ ಹೆದರಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಬಾಲಕಿಯನ್ನು ಪರೀಕ್ಷೆ ನಡೆಸಿದ ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಹೆಚ್ಚಿನ ಚಿಕಿತ್ಸೆಗಾಗಿ ವನಪರ್ತಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಈ ಮಾಹಿತಿ ಕೇಳಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದರ ಬೆನ್ನಲ್ಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.