ETV Bharat / bharat

ಹಿಮಾಚಲ ಮಳೆಗೆ 55 ಜನ ಬಲಿ.. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ - ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಎಲ್ಲೆಂದರಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

55 deaths in Himachal in 24 hours  no cultural programs on Independence Day  Independence Day  Heavy rain in Himachal  ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ  ಹಿಮಾಚಲ ಮಳೆಗೆ 55 ಜನ ಬಲಿ  ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಮಳೆ  ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು  ಹಿಮಾಚಲ ಪ್ರದೇಶಕ್ಕೆ ಕರಳಾ ದಿನ  ಧಾರಾಕಾರ ಮಳೆಯಿಂದ ಸಂಭವಿಸಿದ್ದ ವಿವಿಧ ದುರಂತ  ಇಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ  ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ  ಸಿಎಂ ಜೊತೆ ಮಾತನಾಡಿದ ಜೆಪಿ ನಡ್ಡಾ
ಹಿಮಾಚಲ ಮಳೆಗೆ 55 ಜನ ಬಲಿ
author img

By

Published : Aug 15, 2023, 7:20 AM IST

Updated : Aug 15, 2023, 12:53 PM IST

ಶಿಮ್ಲಾ, ಹಿಮಾಚಲ ಪ್ರದೇಶ: ಆಗಸ್ಟ್ 14 ರ ದಿನ ಹಿಮಾಚಲ ಪ್ರದೇಶಕ್ಕೆ ಕರಾಳ ದಿನವೆಂದೇ ಹೇಳಬಹುದು. ಧಾರಾಕಾರ ಮಳೆಯಿಂದ ಸಂಭವಿಸಿದ್ದ ವಿವಿಧ ದುರಂತಗಳಲ್ಲಿ ಸುಮಾರು 55 ಜನರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲ ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ರೈತರ ಬೆಳೆಯೂ ಹಾಳಾಗಿದೆ. ವಿವಿಧೆಡೆ ಭೂಕುಸಿತದಿಂದಾಗಿ ಹಲವು ರಸ್ತೆಗಳು ಬಂದ್‌ ಆಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

24 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಸಾವು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸೋಮವಾರ ಸಂಜೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಗೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಶಿವದೇವಾಲಯದ ಅವಶೇಷಗಳಡಿಯಿಂದ 10 ಮೃತದೇಹಗಳು ಪತ್ತೆ: ಹಿಮಾಚಲದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಂತಹ ಮಳೆ ಸುರಿದಿರಲಿಲ್ಲ.. ಇದರಲ್ಲಿ 50 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಶಿಮ್ಲಾದ ಶಿವ ದೇವಾಲಯದಲ್ಲಿ ಭೂಕುಸಿತದಲ್ಲಿ ಇನ್ನೂ 20 ಮಂದಿ ಸಾವನ್ನಪ್ಪಿರುವ ಶಂಕೆ ಇದ್ದು, ನಿನ್ನ 8 ಜನರ ಮೃತದೇಹಗಳನ್ನು ನಿನ್ನೆ ಹೊರತೆಗೆಯಲಾಗಿತ್ತು. ಇಂದು ಸಹ ಎರಡು ಮೃತ ದೇಹಗಳನ್ನ ಹೊರ ತೆಗೆಯಲಾಗಿದೆ. ಒಟ್ಟು 10 ಮೃತದೇಹಗಳು ಇಲ್ಲಿ ದೊರೆತಿವೆ. ಮುಂದಿನ ದಿನಗಳಲ್ಲಿ ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ: ಮಳೆಯಿಂದಾದ ದುರಂತಗಳ ಹಿನ್ನೆಲೆ ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸುಖು ಮಾತನಾಡಿ, ಸಚಿವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತ್ರ ಧ್ವಜಾರೋಹಣ ಮಾಡುತ್ತಾರೆ. ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ಅಥವಾ ಪರೇಡ್‌ನಲ್ಲಿ ಭಾಗವಹಿಸುವ ಇತರ ತುಕಡಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿರುತ್ತವೆ. ಈ ಬಾರಿ ಹಿಮಾಚಲದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯಿಂದ ಚೇತರಿಸಿಕೊಳ್ಳಲು ಸಮಯ ಹಿಡಿಯಲಿದೆ ಎಂದು ಸಿಎಂ ತಿಳಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ: ಹಿಮಾಚಲದಲ್ಲಿ ಸಂಭವಿಸಿದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಅಧ್ಯಕ್ಷೆ ದ್ರೌಪದಿ ಮುರ್ಮು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ತಮ್ಮ ಟ್ವೀಟ್‌ನಲ್ಲಿ ಹಿಮಾಚಲದಲ್ಲಿ ಭಾರಿ ನಷ್ಟದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಸಿಎಂ ಜೊತೆ ಮಾತನಾಡಿದ ಜೆಪಿ ನಡ್ಡಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯದ ಸಿಎಂ ಸುಖವಿಂದರ್ ಸಿಂಗ್ ಸುಖು ಅವರೊಂದಿಗೆ ಫೋನ್​ ಮೂಲಕ ಮಾತನಾಡಿದರು. ನಡ್ಡಾ ಅವರು ಕೇಂದ್ರ ಸರ್ಕಾರದಿಂದ ನೆರವು ನೀಡುವ ಭರವಸೆ ನೀಡಿದ್ದಾರೆ. ಮತ್ತೊಂದೆಡೆ, ಹಿಮಾಚಲ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕೂಡ ಈ ಮಳೆಯ ಅವಾಂತರ ಕಂಡು ಬೆಚ್ಚಿಬಿದ್ದಿದ್ದಾರೆ. ಆಗಸ್ಟ್ 15 ರಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಅಟ್ ಹೋಮ್ ಕಾರ್ಯಕ್ರಮವನ್ನು ರಾಜ್ಯಪಾಲರು ರದ್ದುಗೊಳಿಸಿದ್ದಾರೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ಅವರ ಸಂಪುಟ ಸದಸ್ಯರು ಶಿಮ್ಲಾ, ಸೋಲನ್ ಇತ್ಯಾದಿಗಳಲ್ಲಿ ಸಂಭವಿಸಿದ ದುರಂತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ ಸಂತ್ರಸ್ತ ಜನರಿಗೆ ಸಾಂತ್ವನ ಮತ್ತು ಸಾಧ್ಯ ಇರುವ ಎಲ್ಲ ಸಹಾಯದ ಭರವಸೆ ನೀಡಿದರು. ಹಿಮಾಚಲದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ಹಿಮಾಚಲ ಮಳೆಗೆ 55 ಜನ ಬಲಿ: ಸಂಜೆಯವರೆಗೂ ವಿವಿಧ ಜಿಲ್ಲೆಗಳಿಂದ ಬಂದ ಮಾಹಿತಿ ಪ್ರಕಾರ ಇದುವರೆಗೆ 55 ಸಾವುಗಳು ಸಂಭವಿಸಿವೆ. ಶಿಮ್ಲಾ ಜಿಲ್ಲೆಯಲ್ಲಿ 14, ಮಂಡಿ ಜಿಲ್ಲೆಯಲ್ಲಿ 19, ಸಿರ್ಮೌರ್ ಜಿಲ್ಲೆಯಲ್ಲಿ 7, ಹಮೀರ್‌ಪುರ, ಕಾಂಗ್ರಾ, ಬಿಲಾಸ್‌ಪುರ ಸೇರಿದಂತೆ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ವಿವಿಧ ದುರಂತಗಳಲ್ಲಿ 13 ಸಾವುಗಳು ಸೇರಿದಂತೆ ಒಟ್ಟು ಸಂಖ್ಯೆ 55 ಜನರು ಮೃತಪಟ್ಟಿದ್ದಾರೆ. 24 ಗಂಟೆಯೊಳಗೆ ರಾಜ್ಯದಲ್ಲಿ ಸಂಭವಿಸಿದ ಈ ಅವಘಡಗಳಿಂದ ರಾಜ್ಯದ ಜನರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ ಐಜಿಎಂಸಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

ಓದಿ: Gallantry awards: 4 ಕೀರ್ತಿ ಚಕ್ರ, 11 ಶೌರ್ಯ ಚಕ್ರ ಸೇರಿದಂತೆ 76 ಶೌರ್ಯ ಪ್ರಶಸ್ತಿಗಳಿಗೆ ರಾಷ್ಟ್ರಪತಿ ಅನುಮೋದನೆ

Last Updated : Aug 15, 2023, 12:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.