ETV Bharat / bharat

ಬಂಗಾಳದ ನರೇಂದ್ರಪುರದಲ್ಲಿ 56 ಬಾಂಬ್‌ ವಶಕ್ಕೆ ಪಡೆದ ಪೊಲೀಸರು​

ಗುಪ್ತ ಮಾಹಿತಿ ಆಧಾರದ ಮೇಲೆ ನರೇಂದ್ರಪುರ ಠಾಣೆಯ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಒಟ್ಟು 56 ಬಾಂಬ್​ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬಾಂಬ್
ಬಾಂಬ್
author img

By

Published : Mar 29, 2021, 6:40 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ನರೇಂದ್ರಪುರದಲ್ಲಿ ಶನಿವಾರ ಮತ್ತು ಭಾನುವಾರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ 56 ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಗುಪ್ತ ಮಾಹಿತಿ ಆಧಾರದ ಮೇಲೆ ನರೇಂದ್ರಪುರ ಠಾಣೆಯ ಪೊಲೀಸರ ತಂಡ ಖೇದಹದ ಕಾಂತಿಪೋಟದಲ್ಲಿ ಬಿದಿರಿನಿಂದ ನಿರ್ಮಾಣ ಮಾಡಿದ್ದ ಶೆಡ್ ಮೇಲೆ ದಾಳಿ ನಡೆಸಿದೆ. ಈ ವೇಳೆ 56 ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದು, ಬಾಂಬ್​ ಉತ್ಪಾದನೆ, ಸಾಗಣೆ, ಅಕ್ರಮ ಬಾಂಬ್‌ ದಂಧೆಯಲ್ಲಿ ಭಾಗಿಯಾಗಿರುವ ತರುಣ್ ಮತ್ತು ಇತರ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸ್​ ತನಿಖೆ ಮುಂದುವರೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಜಾಗರೂಕರಾಗಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಮತದಾನ ಶನಿವಾರ ನಡೆದಿದ್ದು, ಶೇಕಡಾ 79.79 ರಷ್ಟು ಮತದಾನವಾಗಿದೆ. ಉಳಿದ ಏಳು ಹಂತಗಳ ಮತದಾನ ನಿಗದಿಯಾದ ದಿನಾಂಕಗಳಂದು ನಡೆಯಲಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.