ETV Bharat / bharat

ಬೆಂಗಳೂರಿನಲ್ಲಿದ್ದುಕೊಂಡು ನಕಲಿ ದಾಖಲೆ ಸೃಷ್ಟಿಸಿ ರೋಹಿಂಗ್ಯಾಗಳನ್ನು ಭಾರತದೊಳಗೆ ಸೇರಿಸುತ್ತಿದ್ದ ವ್ಯಕ್ತಿ ಸೇರಿ 6 ಮಂದಿ ಬಂಧನ

author img

By

Published : Mar 12, 2022, 10:42 AM IST

ರೋಹಿಂಗ್ಯಾ ಮುಸ್ಲಿಮರನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಭಾರತದ ಭೂಪ್ರದೇಶಕ್ಕೆ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದು, ಈ ಕುರಿತಂತೆ ಡಿಸೆಂಬರ್‌ನಲ್ಲಿ ಮಾಹಿತಿ ಪಡೆದ ಎನ್‌ಐಎ ಈ ಸಂಬಂಧ ಐಪಿಸಿ ಸೆಕ್ಷನ್ 370 ಮತ್ತು 370(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು..

6 held for helping Rohingya Muslims enter India illegally
ಬೆಂಗಳೂರಿನಲ್ಲಿದ್ದು ನಕಲಿ ದಾಖಲೆ ಸೃಷ್ಟಿಸಿ ರೋಹಿಂಗ್ಯಾಗಳನ್ನು ಭಾರತದೊಳಗೆ ಸೇರಿಸುತ್ತಿದ್ದ ವ್ಯಕ್ತಿ ಸೇರಿ 6 ಮಂದಿ ಬಂಧನ

ನವದೆಹಲಿ : ನಕಲಿ ದಾಖಲೆಗಳನ್ನು ಸೃಷ್ಟಿಸಿ ರೋಹಿಂಗ್ಯಾ ಮುಸ್ಲಿಮರಿಗೆ ಭಾರತವನ್ನು ಪ್ರವೇಶಿಸಲು ಸಹಾಯ ಮಾಡುತ್ತಿದ್ದ ಮಾನವ ಕಳ್ಳಸಾಗಣೆ ಜಾಲವನ್ನು ಬೇಧಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಆರು ಮಂದಿಯನ್ನು ಬಂಧಿಸಿದ್ದಾರೆ.

ಅಸ್ಸೋಂ, ಪಶ್ಚಿಮ ಬಂಗಾಳ, ಮೇಘಾಲಯ ಮತ್ತು ದೇಶದ ಇತರ ಭಾಗಗಳ ಗಡಿ ಪ್ರದೇಶಗಳಲ್ಲಿ ಮಾನವ ಕಳ್ಳಸಾಗಣೆ ಜಾಲ ಸಕ್ರಿಯವಾಗಿದ್ದು, ಕಾರ್ಯಾಚರಣೆ ನಡೆಸುತ್ತಿತ್ತು. ಈ ಕುರಿತಂತೆ ಎನ್​ಐಎ ಅಧಿಕಾರಿಗಳು ಕರ್ನಾಟಕ, ಅಸ್ಸೋಂ, ಮೇಘಾಲಯದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕುಂಕುಮ್ ಅಹ್ಮದ್ ಚೌಧರಿ ಅಲಿಯಾಸ್ ಕೆಕೆ ಅಹಮದ್ ಚೌಧರಿ ಅಲಿಯಾಸ್ ಅಸಿಕುಲ್ ಅಹ್ಮದ್ ಎಂಬಾತ ಈ ಗುಂಪಿನ ನಾಯಕನಾಗಿದ್ದು, ಈತನ ಜೊತೆಗೆ ಸಹಲಂ ಲಸ್ಕರ್, ಅಹಿಯಾ ಅಹ್ಮದ್ ಬಾಪನ್ ಅಹ್ಮದ್ ಚೌಧರಿ ಮತ್ತು ಜಮಾಲುದ್ದೀನ್ ಅಹ್ಮದ್ ಚೌಧರಿ ಎಂಬುವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಅಗ್ನಿ ದುರಂತ : ಏಳು ಮಂದಿ ದುರ್ಮರಣ

ರೋಹಿಂಗ್ಯಾ ಮುಸ್ಲಿಮರನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಭಾರತದ ಭೂಪ್ರದೇಶಕ್ಕೆ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದು, ಈ ಕುರಿತಂತೆ ಡಿಸೆಂಬರ್‌ನಲ್ಲಿ ಮಾಹಿತಿ ಪಡೆದ ಎನ್‌ಐಎ ಈ ಸಂಬಂಧ ಐಪಿಸಿ ಸೆಕ್ಷನ್ 370 ಮತ್ತು 370(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ಈ ದಂಧೆಯ ಮಾಸ್ಟರ್ ಮೈಂಡ್ ಚೌಧರಿ ಬೆಂಗಳೂರಿನಿಂದ ಮಾನವಕಳ್ಳಸಾಗಣೆ ಜಾಲವನ್ನು ನಡೆಸುತ್ತಿದ್ದ ಎಂದು ಎನ್‌ಐಎ ಹೇಳಿದೆ. ಈ ದಂಧೆ ನಡೆಸುತ್ತಿದ್ದ ಇತರರು ದೇಶದ ವಿವಿಧ ಭಾಗಗಳಲ್ಲಿ ಹರಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.