ಲಖಿಂಪುರ ಖೇರಿ (ಯುಪಿ): ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಶನಿವಾರ ರಾತ್ರಿ ವೇಗವಾಗಿ ಬಂದ ಟ್ರಕ್ ನಿಂತಿದ್ದ ಜನರ ಮೇಲೆ ಹರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
6 ಮಂದಿ ದುರ್ಮರಣ: ಖೇರಿ-ಭರೈಚ್ ಹೆದ್ದಾರಿಯ ಪಾಂಗಿ ಗ್ರಾಮದ ಬಳಿ ಕಾರು-ಸ್ಕೂಟಿ ಅಪಘಾತ ಸಂಭವಿಸಿತ್ತು. ಹೀಗಾಗಿ ರಸ್ತೆ ಬದಿಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಘಟನೆ ನಡೆದಿದೆ. ಮೃತರನ್ನು ರಿಜ್ವಾನ್ (20), ಕರಣ್ (14), ಪರಾಸ್ ನಿಶಾದ್ (84), ಕರುಣೇಶ್ ವರ್ಮಾ (30), ವೀರೇಂದ್ರ ವರ್ಮಾ ಮತ್ತು ಜಂಗ್ ಬಹದ್ದೂರ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಲಖಿಂಪುರ ಖೇರಿಯ ಪಾಂಗಿ ಖುರ್ದ್ ಗ್ರಾಮದ ನಿವಾಸಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ಎಸ್ಪಿ ಮಾಹಿತಿ: ಪೊಲೀಸ್ ವರಿಷ್ಠಾಧಿಕಾರಿ ಗಣೇಶ್ ಪ್ರಸಾದ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ ಗಣೇಶ್ ಪ್ರಸಾದ್, "ರಾಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಿ ಗ್ರಾಮದ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಗಾಯಗೊಂಡಿದ್ದ. ಇದನ್ನು ನೋಡಲು ಕೆಲವರು ರಸ್ತೆಯಲ್ಲಿ ಜಮಾಯಿಸಿದರು. ಇದೇ ವೇಳೆ ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ" ಎಂದು ಮಾಹಿತಿ ನೀಡಿದರು.
-
मुख्यमंत्री जी ने घायलों को तत्काल अस्पताल पहुंचाकर जिला प्रशासन के अधिकारियों को उनका समुचित उपचार कराने तथा जिलाधिकारी और पुलिस के वरिष्ठ अधिकारियों को मौके पर जाकर राहत कार्य कराने के निर्देश दिए हैं।
— CM Office, GoUP (@CMOfficeUP) January 28, 2023 " class="align-text-top noRightClick twitterSection" data="
उन्होंने घायलों के शीघ्र स्वस्थ होने की कामना की है।
">मुख्यमंत्री जी ने घायलों को तत्काल अस्पताल पहुंचाकर जिला प्रशासन के अधिकारियों को उनका समुचित उपचार कराने तथा जिलाधिकारी और पुलिस के वरिष्ठ अधिकारियों को मौके पर जाकर राहत कार्य कराने के निर्देश दिए हैं।
— CM Office, GoUP (@CMOfficeUP) January 28, 2023
उन्होंने घायलों के शीघ्र स्वस्थ होने की कामना की है।मुख्यमंत्री जी ने घायलों को तत्काल अस्पताल पहुंचाकर जिला प्रशासन के अधिकारियों को उनका समुचित उपचार कराने तथा जिलाधिकारी और पुलिस के वरिष्ठ अधिकारियों को मौके पर जाकर राहत कार्य कराने के निर्देश दिए हैं।
— CM Office, GoUP (@CMOfficeUP) January 28, 2023
उन्होंने घायलों के शीघ्र स्वस्थ होने की कामना की है।
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾಣಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಮಹೇಂದ್ರ ಬಹದ್ದೂರ್ ಸಿಂಗ್, ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಒ) ಅನಿಲ್ ಕುಮಾರ್ ಸಿಂಗ್, ಮತ್ತು ಎಸ್ ಗಣೇಶ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಿಎಂಟಿಸಿ ಬಸ್ನಿಂದ ಸರಣಿ ಅಪಘಾತ: ನಿನ್ನೆ(ಶನಿವಾರ) ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಿಂದ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸಾವನಪ್ಪಿದ್ದಾನೆ. ಆಯೂಬ್ ಮೃತ ವ್ಯಕ್ತಿ. ಭಾರತೀಯ ಸಿಟಿ ಕ್ರಾಸ್ ಬಳಿ ಘಟನೆ ಸಂಭವಿಸಿತ್ತು.
ಅಪಘಾತ ಸಂಭವಿಸಿದ್ದು ಹೇಗೆ?: ನಾಗವಾರ, ಯಲಹಂಕ ಮಾರ್ಗದ ಬಸ್ ಬೆಳ್ಳಳ್ಳಿ ಕಡೆಯಿಂದ ಹೆಗಡೆನಗರ ಮಾರ್ಗವಾಗಿ ಹೊಗುತ್ತಿತ್ತು. ಭಾರತೀಯ ಸಿಟಿ ಜಂಕ್ಷನ್ ಬಳಿ ಟ್ರಾಫಿಕ್ ವಾರ್ಡನ್ ಸೂಚನೆ ಮೇರೆಗೆ ಕಾರುಗಳ ಮತ್ತು ಬೈಕ್‌ಗಳು ನಿಂತಿದ್ದವು. ಈ ವೇಳೆ ಹಿಂದೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಬಸ್ ಬೈಕ್‌ಗಳು ಸೇರಿದಂತೆ ಇತರ ವಾಹನಗಳನ್ನು ಎದುರಿನ ರಸ್ತೆಯವರೆಗೂ ತಳ್ಳಿಕೊಂಡು ಹೋಗಿತ್ತು.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ನಿಂದ ಸರಣಿ ಅಪಘಾತ.. ಬೈಕ್ ಸವಾರ ಸಾವು, ಮೂವರಿಗೆ ಗಾಯ