ನವದೆಹಲಿ : ಕೊರೊನಾ ವ್ಯಾಕ್ಸಿನ್ ಪಡೆದುಕೊಳ್ಳಲು ಕೋವಿನ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಲಸಿಕಾಕರಣಕ್ಕೆ ಇದೀಗ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಕೇಂದ್ರ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
C0WIN ಪೋರ್ಟಲ್ನಲ್ಲಿ ಒಂದೇ ಮೊಬೈಲ್ ನಂಬರ್ ಬಳಕೆ ಮಾಡಿಕೊಂಡು ಆರು ಸದಸ್ಯರು ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ನಾಲ್ವರು ಸದಸ್ಯರು ಈ ಪೋರ್ಟಲ್ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿತ್ತು. ಆದರೆ, ಇದೀಗ ಅದರ ಮಿತಿ ಏರಿಸಲಾಗಿದೆ.
ಕೋವಿಡ್ ವ್ಯಾಕ್ಸಿನೇಷನ್ಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. COWIN ಪೋರ್ಟಲ್ನಲ್ಲಿ ಕಾಣಿಸಿಕೊಂಡಿದ್ದ ಕೆಲವೊಂದು ಸಮಸ್ಯೆ ಕೂಡ ಬಗೆಹರಿಸಲಾಗಿದ್ದು, ಹೊಸ ವೈಶಿಷ್ಟ್ಯ ಪರಿಚಯಿಸಲಾಗಿದೆ.
ಇದನ್ನೂ ಓದಿರಿ: ಸೆಲ್ಫಿಗೋಸ್ಕರ ಬೈಕ್ ಸ್ಟಂಟ್ ಮಾಡಲು ಹೋಗಿ ಭೀಕರ ಅಪಘಾತ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ..
ವ್ಯಾಕ್ಸಿನೇಷನ್ ಪಡೆದುಕೊಂಡಿರುವ ಅರ್ಹರ ಪ್ರಮಾಣಪತ್ರದಲ್ಲಿ ಯಾವುದಾದರೂ ದೋಷ ಕಂಡು ಬಂದಿದ್ದರೆ ಅವುಗಳನ್ನ ಸರಿಪಡಿಸಿಕೊಳ್ಳಲು ಇದೀಗ ಕೋವಿಡ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಏಳು ದಿನಗಳಲ್ಲಿ ಅದನ್ನ ಸರಿಪಡಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ