ETV Bharat / bharat

ಕನ್ಹಯ್ಯಾ ಲಾಲ್ ಹತ್ಯೆ ಕುರಿತು ಫೇಸ್‌ಬುಕ್​ನಲ್ಲಿ ಪೋಸ್ಟ್‌ ಹಾಕಿದ ಬಾಲಕಿಗೆ ಜೀವ ಬೆದರಿಕೆ - ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಹತ್ಯೆಯ ಕುರಿತು ಫೇಸ್‌ಬುಕ್ ಪೋಸ್ಟ್‌ ಹಾಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾನೆ.

Facebook
Facebook
author img

By

Published : Jul 7, 2022, 10:28 AM IST

ಮುಂಬೈ: ಉದಯಪುರದಲ್ಲಿ ನಡೆದ ಕನ್ಹಯ್ಯಾ ಲಾಲ್ ಹತ್ಯೆ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಮುಂಬೈನ ಗೋರೆಗಾಂವ್‌ನ 16 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೊಬ್ಬ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ಮುಂಬೈ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಿಡಿಗೇಡಿಗೆ ಬಲೆ ಬೀಸಿ, ತನಿಖೆ ಮುಂದುವರಿಸಿದ್ದಾರೆ.

ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿರುವ ಕುರಿತು ದಕ್ಷಿಣ ಮುಂಬೈನ ಗೋರೆಗಾಂವ್​ನ ಬಾಲಕಿಯೊಬ್ಬಳು ವಿ.ಪಿ.ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಕನ್ಹಯ್ಯಾ ಲಾಲ್ ಹತ್ಯೆಯ ಕುರಿತು ಬಾಲಕಿ ತನ್ನ ಫೇಸ್‌ಬುಕ್​ ಖಾತೆಯಲ್ಲಿ ಕೆಲವು ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಳು. ಇದನ್ನು ನೋಡಿದ ಅಪರಿಚಿತನೊಬ್ಬ ಆಕೆಗೆ ವಾಟ್ಸ್​ಆಪ್​ನಲ್ಲಿ ಕರೆ ಮಾಡಿ ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆ ಹಾಕಿದ್ದಾನೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಅವರನ್ನು ಬೆಂಬಲಿಸುವ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಕನ್ಹಯ್ಯಾ ಲಾಲ್ ಅವರನ್ನು ಜೂನ್ 28 ರಂದು ರಾಜಸ್ಥಾನದ ಉದಯಪುರ ನಗರದ ಅವರ ಅಂಗಡಿಯಲ್ಲಿ ಮತಾಂಧ ದುರುಳರು ಶಿರಚ್ಛೇದಿಸಿ ಕೊಲೆ ಮಾಡಿ ವಿಕೃತಿ ಮೆರೆದಿದ್ದರು.

ಇದನ್ನೂ ಓದಿ: ಉದಯ್‌ಪುರ ಹತ್ಯೆ: ಜುಲೈ 12ರವರೆಗೆ ಮತ್ತೊಬ್ಬ ಆರೋಪಿ ಎನ್‌ಐಎ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.