ಅಹಮದಾಬಾದ್(ಗುಜರಾತ್): ದಿನೇ ದಿನೆ ಕೋವಿಡ್ ಉಲ್ಭಣಗೊಳ್ಳುತ್ತಿದ್ದು, ಆತಂಕ ಹೆಚ್ಚಾಗಿದೆ. ಕಳೆದ 10 ದಿನಗಳಲ್ಲಿ ಅಹಮದಾಬಾದ್ನಲ್ಲಿರುವ ಭಾರತೀಯ ಶಿಕ್ಷಣ ಸಂಸ್ಥೆ/ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(ಐಐಎಂ)ನ 67 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಗುಜರಾತ್ನಲ್ಲಿ ಸೋಮವಾರದಂದು 6,097 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿನಿಂದ 1,539 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 32,469 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ. ಈವರೆಗೆ ರಾಜ್ಯದಲ್ಲಿ 8,25,702 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 10,130 ಜನರು ಬಲಿಯಾಗಿದ್ದಾರೆ. ಇನ್ನೂ 264 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
ಇದನ್ನೂ ಓದಿ: Precaution Dose: ಮೊದಲ ದಿನವೇ 9 ಲಕ್ಷಕ್ಕೂ ಹೆಚ್ಚು ಮಂದಿಗೆ 3ನೇ ಡೋಸ್ ಕೋವಿಡ್ ಲಸಿಕೆ
ಕೋವಿಡ್ ಹೆಚ್ಚಳ ಹಿನ್ನೆಲೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸೋಮವಾರದಂದು, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಗೋವಾ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು, ಮಹಾರಾಷ್ಟ್ರದ ಅಧಿಕಾರಿಗಳನ್ನು ಭೇಟಿ ಮಾಡಿ ಈ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.
ಐಐಎಂ ಕೋವಿಡ್ ವರದಿ:
- 01-01-2022 (05)
- 02-01-2022 (05)
- 03-01-2022 (05)
- 04-01-2022 (02)
- 05-01-2022 (06)
- 06-01-2022 (15)
- 07-01-2022 (11)
- 08-01-2022 (10)
- 09-01-2022 (06)
- 10-01-2022 (07)