ETV Bharat / bharat

ಕಟ್ಟಡದ ಮೇಲ್ಛಾವಣಿ ಕುಸಿದು 7 ಮಂದಿ ದುರ್ಮರಣ.. ಅವಶೇಷದಡಿ ಕೆಲವರು ಸಿಲುಕಿರುವ ಶಂಕೆ - Ulhasnagar building mishap

ವಸತಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಬಿದ್ದಿರುವ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

residential building collapses
ವಸತಿ ಕಟ್ಟಡದ ಮೇಲ್ಛಾವಣಿ ಕುಸಿದು ಏಳು ಮಂದಿ ದುರ್ಮರಣ
author img

By

Published : May 29, 2021, 4:31 AM IST

Updated : May 29, 2021, 10:50 AM IST

ಥಾಣೆ(ಮಹಾರಾಷ್ಟ್ರ): ಮಹಾಮಾರಿ ಕೊರೊನಾ ಸಂಕಷ್ಟದ ಮಧ್ಯೆ ಮಹಾರಾಷ್ಟ್ರದ ಥಾಣೆಯಲ್ಲಿ ವಸತಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದಿರುವ ಘಟನೆ ನಡೆದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ.

ವಸತಿ ಕಟ್ಟಡದ ಮೇಲ್ಛಾವಣಿ ಕುಸಿದು ಏಳು ಮಂದಿ ದುರ್ಮರಣ

ಥಾಣಾ ಮಹಾನಗರ ಪಾಲಿಕೆಯ ಉಲ್ಲಾಸ್​ ನಗರದಲ್ಲಿ ಈ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಘಟನಾ ಸ್ಥಳದಲ್ಲಿ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಪಡೆ ಬಿಡುಬಿಟ್ಟಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ. ಅವಶೇಷಗಳ ಅಡಿ 3-4 ಜನರು ಸಿಲುಕಿಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅವರಿಗೋಸ್ಕರ ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಪಾಲಿಕೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಸಿಕ್ತು 'Diamond'... ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ರೈತ!

ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಉಲ್ಲಾಸ್‌ ನಗರದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಕಳೆದ ಕೆಲ ದಿನಗಳ ಹಿಂದೆ ಮುಂಬೈನಲ್ಲಿ ಕಟ್ಟಡವೊಂದು ಕುಸಿದು ಬಿದ್ದಿತ್ತು. ಆದರೆ ಈ ವೇಳೆ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿರಲಿಲ್ಲ.

Last Updated : May 29, 2021, 10:50 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.