ಹೈದರಾಬಾದ್ : ತೆಲಂಗಾಣದ ಎರಡು ಜಿಲ್ಲೆಗಳಲ್ಲಿ ನಿನ್ನೆ ಮತ್ತು ಇಂದು ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ 5 ಜನ ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಯಾದಾದ್ರಿ ಜಿಲ್ಲೆ : ನಿನ್ನೆ ಯಾದಾದ್ರಿ ಜಿಲ್ಲೆಯ ಚೌಟಪಾಲ್ ಮಂಡಲದ ದಿವಿಸ್ ಲ್ಯಾಬ್ ಬಳಿ ಒಂದೇ ಸ್ಥಳದಲ್ಲಿ ಎರಡು ಗಂಟೆಗಳ ಅವಧಿಯಲ್ಲಿ ಎರಡು ಅಪಘಾತಗಳು ಸಂಭವಿಸಿವೆ. ತಂದೆ-ಮಗ ಬೈಕ್‌ನಲ್ಲಿ ಹೋಗುತ್ತಿದ್ದರು. ಆ ವೇಳೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ತಂದೆ ಸ್ಥಳದಲ್ಲೇ ಸಾವಿಗೀಡಾದರೆ, ಮಗ ನಾಗೇಶ್ ಗಂಭೀರವಾಗಿ ಗಾಯಗೊಂಡಿದ್ದ.
ಈ ಘಟನೆ ನಡೆದು ಎರಡು ಗಂಟೆಗಳ ನಂತರ ಅಲ್ಲಿಯೇ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ಸ್ಥಳೀಯ ಕೆಮಿಕಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ ವಲಯದ ಧರ್ಮೋಜಿಗುಡೆಂನಲ್ಲಿ ಆರ್‌ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ಮೃತರು ಹೈದರಾಬಾದ್‌ಗೆ ಸೇರಿದವರು ಎಂದು ಪೊಲೀಸರು ಗುರುತಿಸಿದ್ದಾರೆ. ಇವರೆಲ್ಲರೂ ಬಜರಂಗದಳದ ಸದಸ್ಯರು ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚೌಟಪಾಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಇದನ್ನೂ ಓದಿ: ಸಂಕೇಶ್ವರದಲ್ಲಿ ಶೂಟೌಟ್ ನಡೆಸಿ ಮಹಿಳೆಯ ಕೊಲೆ!
ಹೈದರಾಬಾದ್ : ಹೈದರಾಬಾದ್‌ನ ಕೂಕಟ್‌ಪಲ್ಲಿಯಲ್ಲಿ ನಿನ್ನೆ ಇಬ್ಬರು ಸಾವಿಗೀಡಾಗಿದ್ದಾರೆ. ರಸ್ತೆ ದಾಟುತ್ತಿದ್ದಾಗ ಓಬುಲ್ ರೆಡ್ಡಿ ಎಂಬುವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಜೊತೆಗೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ವಹೀದ್ ಎಂಬುವರು ಸಹ ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವಿಗೀಡಾಗಿದ್ದಾರೆ.
ಹೈದರಾಬಾದ್- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರರು ಜನರಲ್ಲಿ ಆತಂಕ ಸೃಷ್ಟಿಸಿದ್ದಾರೆ. ಕೆಲವು ಯುವಕರು 10 ಬೈಕ್‌ಗಳಲ್ಲಿ ಹೋಗುತ್ತಿದ್ದರು ಮತ್ತು ಶಂಶಾಬಾದ್ ಕಡೆಗೆ ವೇಗವಾಗಿ ಬೈಕ್ ಓಡಿಸಿಕೊಂಡು ಬಂದಿದ್ದಾರೆ.
ಜಯಶಂಕರ್ ವಿಶ್ವವಿದ್ಯಾನಿಲಯದ ಮೇಲ್ಸೇತುವೆ ತಲುಪಿದಾಗ ಮೈಕೆಲ್ ಎಂಬ ಸವಾರ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಆ ವೇಳೆ ಸುಮಾರು 100 ಮೀಟರ್‌ವರೆಗೆ ಬೈಕ್ ಸಮೇತ ಉಜ್ಜಿಕೊಂಡು ಹೋಗಿದ್ದಾನೆ. ಈತ ತೀವ್ರವಾಗಿ ಗಾಯಗೊಂಡಿದ್ದು, ಬೈಕ್ ಜಖಂಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.