ETV Bharat / bharat

GOA ಚುನಾವಣೆ: 7 ರಿಂದ 8 ಅತೃಪ್ತ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ - ಗಿರೀಶ್ ಚೋಡಂಕರ್ - ಬಿಜೆಪಿ ಅತೃಪ್ತ ಶಾಸಕರು

ಬಿಜೆಪಿ ಅತೃಪ್ತ ಶಾಸಕರನ್ನು ಪಕ್ಷಕ್ಕೆ ಕರೆದುಕೊಳ್ಳುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗಿರೀಶ್ ಚೋಡಂಕರ್ ತಿಳಿಸಿದ್ದಾರೆ.

GOA ELECTION
ಗೋವಾ ವಿಧಾನಸಭಾ ಚುನಾವಣೆ
author img

By

Published : Nov 12, 2021, 11:06 AM IST

ಗೋವಾ: ಬಿಜೆಪಿಯ 7 ರಿಂದ 8 ಅತೃಪ್ತ ಶಾಸಕರನ್ನು ಸೆಳೆದು ಅಧಿಕಾರ ಹಿಡಿಯುವ ಉದ್ದೇಶ ಕಾಂಗ್ರೆಸ್ ಪಕ್ಷಕ್ಕಿದೆ. ಅತೃಪ್ತ ಶಾಸಕರನ್ನು ಪಕ್ಷಕ್ಕೆ ಕರೆದುಕೊಳ್ಳುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗಿರೀಶ್ ಚೋಡಂಕರ್ ತಿಳಿಸಿದ್ದಾರೆ.

2022ರಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈಗಾಗಲೇ ಪಕ್ಷಗಳು ತಯಾರಿ ನಡೆಸಿಕೊಳ್ಳುತ್ತಿವೆ. ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಚೋಡಂಕರ್ ಸುಳಿವು ನೀಡಿದ್ದಾರೆ.

ಬಿಜೆಪಿ ಶಾಸಕರು ಜನರಿಗೆ ಅಭಿವೃದ್ಧಿ ಹೆಸರಿನಲ್ಲಿ ಸುಳ್ಳು ಕನಸು ತೋರಿಸಿದ್ದಾರೆ. ಆದರೆ, ಇವು ಸುಳ್ಳು ಕನಸುಗಳೆಂದು ಜನರು ಅರಿತುಕೊಂಡಿದ್ದಾರೆ. ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕರು ಬಿಜೆಪಿ ಚಿಹ್ನೆಯ ಮೇಲೆ ಆಯ್ಕೆಯಾಗುವ ಸಾಧ್ಯತೆ ಕಡಿಮೆ. ಬಿಜೆಪಿಯು ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ ಈ ಶಾಸಕರು ಹೊಸ ದಾರಿ ಹಿಡಿಯಲಾರಂಭಿಸಿದ್ದಾರೆ ಎಂದು ಗಿರೀಶ್ ಚೋಡಂಕರ್ ಹೇಳಿದ್ದಾರೆ.

ಇದನ್ನೂ ಓದಿ: DRUGS: 3,414 ಕಿ.ಗ್ರಾಂ.ಗಳಷ್ಟು ಡ್ರಗ್ಸ್ ವಶಪಡಿಸಿಕೊಂಡ ಮುಂಬೈ ಪೊಲೀಸರು!

7 ರಿಂದ 8 ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ಎನ್‌ಸಿಪಿಯೊಂದಿಗೆ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ. ರಾಜ್ಯದಲ್ಲಿ ಎನ್‌ಸಿಪಿಯೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ. ದೆಹಲಿ ಮತ್ತು ರಾಜ್ಯದಲ್ಲಿ ಸಕಾರಾತ್ಮಕ ಮಾತುಕತೆ ನಡೆದಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.