ETV Bharat / bharat

ಕಲ್ಲು ಗಣಿಗಾರಿಕೆಯಲ್ಲಿ ಕುಸಿತ: ಮೂವರು ಮಹಿಳೆಯರು ಸೇರಿ ಏಳು ಕಾರ್ಮಿಕರ ಸಾವು - ಏಳು ಮಂದಿ ಸಾವು

ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

7 Workers dead
7 Workers dead
author img

By

Published : Aug 11, 2021, 4:29 PM IST

ಬಿಲ್ವಾರಾ(ರಾಜಸ್ಥಾನ): ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್​ ಕುಸಿತಗೊಂಡಿರುವ ಕಾರಣ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಬಿಲ್ವಾರಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

ಆಸಿಂದ್ ಪೊಲೀಸ್ ಠಾಣಾ ವ್ಯಾಪ್ತಿಯ ಲಚ್ಚುಡ ಗ್ರಾಮದಲ್ಲಿ ಅಕ್ರಮವಾಗಿ ಈ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಈಗಾಗಲೇ ಮೃತದೇಹ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮಾಹಿತಿ ಕಲೆ ಹಾಕಿದಾಗ ಈ ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಹೀಗಾಗಿ ತಕ್ಷಣವೇ ಬಂದ್​ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಬಂಗಾರದ ಬೆಲೆಯಲ್ಲಿ ದಾಖಲೆಯ ಇಳಿಕೆ..ಬೆಂಗಳೂರಲ್ಲಿ 10 ಗ್ರಾಂಗೆ ಎಷ್ಟು..?

ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಮಾಲೀಕ ಘಟನೆ ಬಳಿಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಏಳು ಜನರು ಸಾವನ್ನಪ್ಪುತ್ತಿದ್ದಂತೆ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣಗೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.