ಅಮರಾವತಿ (ಮಹಾರಾಷ್ಟ್ರ): ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯೋರ್ವಳು ಮಾನಕ್ಕೆ ಹೆದರಿ ನಿನ್ನೆಯಷ್ಟೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿತ್ತು. ಇದೀಗ ಅದೇ ಜಿಲ್ಲೆಯಿಂದ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಅಮರಾವತಿ ಜಿಲ್ಲೆಯ ಅಂಜನಗಾಂವ ಸುರ್ಜಿ ತಾಲೂಕಿನ ವಂಜ ಎಂಬ ಗ್ರಾಮದಲ್ಲಿ 7 ವರ್ಷದ ಬಾಲಕಿ ಮೇಲೆ 20 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ. ತನ್ನ ಸ್ನೇಹಿತರೊಂದಿಗೆ ಗ್ರಾಮದ ಹೊರಗಿರುವ ಶೌಚಾಲಯಕ್ಕೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್ನಲ್ಲಿ ಬಂದ ಆರೋಪಿ ಹೊತ್ತೊಯ್ದಿದ್ದಾನೆ. ತನ್ನದೇ ಸ್ವಂತ ಹೊಲಕ್ಕೆ ಆಕೆಯನ್ನು ಕರೆದೊಯ್ದು ಕೃತ್ಯ ಎಸಗಿದ್ದಾನೆ.
ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸಾವು
ಸಂತ್ರಸ್ತೆಯ ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.