ETV Bharat / bharat

ಮದುವೆ ಸಮಾರಂಭದಲ್ಲಿ ಗುಂಡಿನ ಮೊರೆತ, ಇಬ್ಬರು ಸಾವು.. ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

author img

By

Published : Feb 6, 2023, 1:49 PM IST

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮದುವೆ ಸಮಾರಂಭದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ತೆಲಂಗಾಣದ ವಾರಂಗಲ್​ನಲ್ಲಿ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.

Firing in Alwar  Firing during wedding ceremony in Alwar  7 years old child and woman died in firing  ಮದುವೆ ಸಮಾರಂಭದಲ್ಲಿ ಗುಂಡಿನ ಮೊಳೆತ  ಉದ್ಯಮಿ ಪ್ರಶಸ್ತಿ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು  ಮದುವೆ ಸಮಾರಂಭದಲ್ಲಿ ಗುಂಡಿನ ದಾಳಿ  ಅತ್ಯುತ್ತಮ ಉದ್ಯಮಿ ಪ್ರಶಸ್ತಿ  ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ  ವಾರಂಗಲ್ ಮಹಾನಗರ ಪಾಲಿಕೆ ಚುನಾವಣೆ  ಕಾರ್ಪೊರೇಟರ್ ಟಿಕೆಟ್ ಸಿಗದ ಹಿನ್ನೆಲೆ  ರಾಜಸ್ಥಾನ​ದಲ್ಲಿ ಮದುವೆ ಸಮಾರಂಭದಲ್ಲಿ ದುರಂತ
ಮದುವೆ ಸಮಾರಂಭದಲ್ಲಿ ಗುಂಡಿನ ಮೊಳೆತ ಇಬ್ಬರು ಸಾವು

ವಾರಂಗಲ್​, ತೆಲಂಗಾಣ: ಸಾಲ ಕೊಟ್ಟವರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರಂಗಲ್ ಎನುಮಾಮುಲದ ಬಾಲಾಜಿನಗರದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಸ್ಥಳೀಯರು ಹಾಗೂ ಪೊಲೀಸರ ಪ್ರಕಾರ, ಬಾಲಾಜಿನಗರದ ಗಂಧಂ ಕುಮಾರಸ್ವಾಮಿ (45) ಎನುಮಾಮುಳ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದು, ರಾಜಕೀಯದಲ್ಲಿ ಮುಂದುವರಿದಿದ್ದಾರೆ. ಕಳೆದ ವಾರಂಗಲ್ ಮಹಾನಗರ ಪಾಲಿಕೆ ಚುನಾವಣೆ ವೇಳೆ ಕಾರ್ಪೊರೇಟರ್ ಟಿಕೆಟ್ ಸಿಗದ ಹಿನ್ನೆಲೆ ತೆರಸಾ ತೊರೆದು ಬಿಜೆಪಿ ಸೇರಿದ್ದರು. ಆ ಪಕ್ಷದ ಪರವಾಗಿ ಸ್ಪರ್ಧಿಸಿ ಸೋತಿದ್ದರು.

ಆದರೆ ಸೆಲ್ಫಿ ವಿಡಿಯೋದಲ್ಲಿ ಚುನಾವಣೆ ಸಂದರ್ಭದಲ್ಲಿ ಎನುಮಾಮು ಮಾಜಿ ಸರಪಂಚ್ ಸಾಂಬೇಶ್ವರ್ ಅವರಿಂದ 25 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸೋಲಿನ ನೋವು ಕಾಡುತ್ತಿದ್ದು, ಇನ್ನೊಂದೆಡೆ ಮಾಜಿ ಸರಪಂಚ್​ ಹಣಕ್ಕಾಗಿ ಕಿರುಕುಳ ನೀಡಿತ್ತಿದ್ದರಿಂದ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ನಂಬಿದವರು ಮೋಸ ಮಾಡಿದ್ದಾರೆ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋದಲ್ಲಿ ಅಳಲು ತೋಡಿಕೊಂಡರು.

ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡದಂತೆ ಪತ್ರ ಬರೆದಿದ್ದಾರೆ. ಈ ವಿಡಿಯೋವನ್ನು ಸ್ನೇಹಿತರು ಮತ್ತು ಸಹ ವ್ಯಾಪಾರಿಗಳಿಗೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಗಂಧಂ ಕುಮಾರಸ್ವಾಮಿ ಅವರ ಪತ್ನಿ ಇನ್ನೊಂದು ಕೋಣೆಯಲ್ಲಿದ್ದರು. ಬಳಿಕ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟೋತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಪತಿಯ ಸಾವಿಗೆ ಕಾರಣರಾದ ಸಾಂಬೇಶ್ವರ್, ಆತನ ಪತ್ನಿ ಪ್ರಮೀಳಾ ಹಾಗೂ ಮತ್ತೋರ್ವ ಕೋಟ ವಿಜಯಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಪತ್ನಿ ಲಕ್ಷ್ಮಿ ಎನುಮಾಮುಲ ಸಿಐಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿ ಅವರು ಈ ಹಿಂದೆ ಸಣ್ಣ ಕೈಗಾರಿಕೆ ವಿಭಾಗದಲ್ಲಿ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದಿರುವುದು ಗಮನಾರ್ಹ.

ರಾಜಸ್ಥಾನ​ದಲ್ಲಿ ಮದುವೆ ಸಮಾರಂಭದಲ್ಲಿ ದುರಂತ: ಭಾನುವಾರ ನಡೆದ ಮದುವೆ ಸಮಾರಂಭದಲ್ಲಿ ದುರಂತ ಘಟನೆಯೊಂದು ನಡೆದಿದೆ. ವರನ ಸಹೋದರ ಮತ್ತು ಇನ್ನೊಬ್ಬ ವ್ಯಕ್ತಿ ಕುಡಿದ ಅಮಲಿನಲ್ಲಿ ಗುಂಡು ಹಾರಿಸಿದ್ದು, ಈ ವೇಳೆ ಮಹಿಳೆ ಹಾಗೂ 7 ವರ್ಷದ ಮಗುವಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲ, ಈ ದುರ್ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳದಿಂದ ಓಡಿ ಹೋಗುತ್ತಿದ್ದ ಆರೋಪಿಗಳಿಬ್ಬರನ್ನೂ ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಭಾನುವಾರ ರಾತ್ರಿ ಖೇಡ್ಲಿಯಲ್ಲಿ ನಡೆದ ರಜಪೂತ ಸಮುದಾಯದ ವಿವಾಹ ಸಮಾರಂಭದಲ್ಲಿ ವರನ ಸಹೋದರ ಮತ್ತು ಆತನ ಸಹಚರರೊಬ್ಬರು ಕುಡಿದ ಅಮಲಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿದ್ದ ಮಹಿಳೆ ದಿನೇಶ್ ಕನ್ವರ್ ಮತ್ತು 7 ವರ್ಷದ ಬಾಲಕ ಸಾಗರ್​ಗೆ ಗುಂಡು ತಗುಲಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲಿದ್ದ ಹಂಸಾ ಮತ್ತು ಪ್ರಾಚಿ ಎಂಬ ಇನ್ನಿಬ್ಬರ ಮಹಿಳೆಯರಿಗೂ ಗುಂಡು ತಗುಲಿದ್ದು, ಹಂಸಾ ಮತ್ತು ಪ್ರಾಚಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ಹೇಳಿದ್ದಾರೆ.

ಗುಂಡಿನ ದಾಳಿಯ ನಂತರ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಯಿತು. ಗಲಾಟೆಯ ನಡುವೆ ಆರೋಪಿಗಳು ಸ್ಥಳದಿಂದ ಓಡಿ ಹೋಗಲಾರಂಭಿಸಿದ್ದರು. ಆದರೆ ಅಲ್ಲಿದ್ದ ಜನರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಮತ್ತು 7 ವರ್ಷದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರು. ಈ ಘಟನೆಯ ನಂತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತು.

ಓದಿ: ಟರ್ಕಿ, ಸಿರಿಯಾದಲ್ಲಿ 'ಸಾವಿನ ಭೂಕಂಪ'.. 360 ಜನರ ಬಲಿ ಪಡೆದ ಪ್ರಕೃತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.