ETV Bharat / bharat

ದೇಶದ ಶೇ.75ರಷ್ಟು ವಯಸ್ಕರರಿಗೆ ಸಂಪೂರ್ಣ ಲಸಿಕೆ ನೀಡಲಾಗಿದೆ : ಮನ್ಸುಖ್ ಮಾಂಡವಿಯಾ - ಭಾರತದಲ್ಲಿ ಶೇ.75ರಷ್ಟು ವಯಸ್ಕರು ಪೂರ್ಣಪ್ರಮಾಣದ ಲಸಿಕೆ

ಈ ವರದಿ ಬಂದ ನಂತರ ಟ್ವೀಟ್ ಮಾಡಿರುವ ಮೋದಿ, ಎಪ್ಪತ್ತೈದು ಪ್ರತಿಶತ ವಯಸ್ಕರು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇಂಥ ಒಂದು ಮಹತ್ವದ ಮೈಲಿಗಲ್ಲು ಸಾಧಿಸಲು ಸಹಾಯ ಮಾಡಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಇದು ಹೆಮ್ಮೆಯ ವಿಚಾರ ಎಂದಿದ್ದಾರೆ..

ಮನ್ಸುಖ್ ಮಾಂಡವಿಯಾ
ಮನ್ಸುಖ್ ಮಾಂಡವಿಯಾ
author img

By

Published : Jan 30, 2022, 5:10 PM IST

ನವದೆಹಲಿ : ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತವು ಭಾನುವಾರ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ದೇಶದ ಶೇ.75ಕ್ಕೂ ಹೆಚ್ಚು ವಯಸ್ಕರರು ಎರಡೂ ಡೋಸ್ ಲಸಿಕೆಗಳನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

  • 'सबका साथ, सबका प्रयास' के मंत्र के साथ, भारत ने अपनी 75% वयस्क आबादी को वैक्सीन की दोनों डोज लगाने का लक्ष्य हासिल कर लिया है।

    कोरोना से लड़ाई में हम निरंतर मज़बूत हो रहें है। हमें सभी नियमों का पालन करते रहना है और जल्द से जल्द वैक्सीन लगवानी है। #SabkoVaccineMuftVaccine pic.twitter.com/wSBg9AQphx

    — Dr Mansukh Mandaviya (@mansukhmandviya) January 30, 2022 " class="align-text-top noRightClick twitterSection" data=" ">

'ಸಬ್ಕಾ ಸಾಥ್, ಸಬ್ಕಾ ಪ್ರಯಾಸ್' ಎಂಬ ಘೋಷಣೆಯಂತೆ ದೇಶದ ಶೇ.75ರಷ್ಟು ವಯಸ್ಕರು ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದಾರೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ನಾವು ಬಲಶಾಲಿಯಾಗುತ್ತಿದ್ದೇವೆ. ನಾವು ಕೋವಿಡ್​ ನಿಯಮಗಳನ್ನು ಪಾಲಿಸಬೇಕು ಮತ್ತು ಸಾಧ್ಯವಾದಷ್ಟು ಬೇಗ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಮಾಂಡವಿಯಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರ ದುರ್ಮರಣ

ಭಾನುವಾರ ಬೆಳಗ್ಗೆ ಬಂದಿರುವ ಆರೋಗ್ಯ ಸಚಿವಾಲಯದ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 62 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆಯನ್ನು ಹಾಕಲಾಗಿದೆ. ದೇಶದಲ್ಲಿ ಇದುವರೆಗೆ ಒಟ್ಟು165.7 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.

ಈ ವರದಿ ಬಂದ ನಂತರ ಟ್ವೀಟ್ ಮಾಡಿರುವ ಮೋದಿ, ಎಪ್ಪತ್ತೈದು ಪ್ರತಿಶತ ವಯಸ್ಕರು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇಂಥ ಒಂದು ಮಹತ್ವದ ಮೈಲಿಗಲ್ಲು ಸಾಧಿಸಲು ಸಹಾಯ ಮಾಡಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಇದು ಹೆಮ್ಮೆಯ ವಿಚಾರ ಎಂದಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 893 ಜನ ಕೊರೊನಾದಿಂದ ಸಾವಿಗೀಡಾಗಿದ್ದು, 2,34,281 ಜನರಿಗೆ ಸೋಂಕು ತಗುಲಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.14.5ಕ್ಕೆ ಏರಿಕೆಯಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.