ETV Bharat / bharat

ಇನ್ಮುಂದೆ ಜಾರ್ಖಂಡ್‌ನಲ್ಲಿ ಖಾಸಗಿ ವಲಯದಲ್ಲಿ ಶೇ.75ರಷ್ಟು ಮೀಸಲಾತಿ.. ಸಿಎಂ ಸೂರೆನ್

ಮಾರ್ಚ್‌ 12ರಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಲ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸದನವನ್ನು ಜಾಗೃತಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ..

75-percent-reservation-in-private-sector-applied-in-jharkhand
ಇನ್ಮುಂದೆ ಜಾರ್ಖಂಡ್‌ನಲ್ಲಿ ಖಾಸಗಿ ವಲಯದಲ್ಲಿ 75 % ಮೀಸಲಾತಿ
author img

By

Published : Mar 15, 2021, 5:21 PM IST

ರಾಂಚಿ : ಜಾರ್ಖಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಾರ್ಖಾನೆಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಶೇ. 75ರಷ್ಟು ಉದ್ಯೋಗ ಸೌಲಭ್ಯ ಸಿಗಲಿದೆ.

ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ತಮ್ಮ ಸರ್ಕಾರ ಪ್ರಜಾಪ್ರಭುತ್ವದ ಘನತೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ರಚನೆಯಾದಾಗಿನಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಅನೇಕ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ.

ಈ ಸಮಯದಲ್ಲಿ ಸರ್ಕಾರವು ಅನೇಕ ಸವಾಲುಗಳನ್ನು ಎದುರಿಸಿದೆ. ಆದರೂ ಮಾರ್ಚ್ 12ರಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೆಲ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸದನವನ್ನು ಜಾಗೃತಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ.

ಅಂಗವಿಕಲರಿಗೆ ಹೆಚ್ಚುವರಿ ಶೇ.50ರಷ್ಟು ಮಾಶಾಸನ : ಕಾರ್ಮಿಕ ಯೋಜನೆ ಅಡಿ ತಾಂತ್ರಿಕವಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿಗಳ ಪ್ರೋತ್ಸಾಹಕ ಯೋಜನೆಯ ಮುಖ್ಯಸ್ಥರ ಅಡಿ ವಾರ್ಷಿಕವಾಗಿ ₹5000 ಪಡೆಯಲಿದ್ದಾರೆ. ವಿಧವೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹೆಚ್ಚುವರಿ ಶೇ.50ರಷ್ಟು ಹಣವನ್ನು ನೀಡಲಾಗುತ್ತದೆ ಎಂದರು.

ರಸ್ತೆ ಅಪಘಾತದಲ್ಲಿ ಯಾರಾದರೂ ಸಾವಿಗೀಡಾದರೆ ಆತನ ಅವಲಂಬಿತರಿಗೆ ತಕ್ಷಣಕ್ಕೆ ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಈ ಮೊತ್ತವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾಗುವುದು ಎಂದು ಸಿಎಂ ಸದನಕ್ಕೆ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.