ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಸೆ.17ರಂದು ಎಂಟು ಚೀತಾಗಳನ್ನು ಹೆಲಿಕಾಪ್ಟರ್ ಮೂಲಕ ತರಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೇ ಈ ದಿನ ಕುನೋಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಚೀತಾಗಳನ್ನು ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ರಾಜಸ್ಥಾನದ ಜೈಪುರಕ್ಕೆ ಸರಕು ವಿಮಾನದಲ್ಲಿ ಕರೆತರಲಾಗುವುದು. ಸೆ.17 ರಂದು ಹೆಲಿಕಾಪ್ಟರ್‌ನಲ್ಲಿ ಅವುಗಳನ್ನು ಕುನೋ-ಪಾಲ್ಪುರ್‌ಗೆ ಕರೆತರಲಾಗುವುದು ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ ಎಸ್ ಚೌಹಾಣ್ ತಿಳಿಸಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬದಂದು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
1952ರ ಬಳಿಕ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ. ಇಂಟರ್ ಕಾಂಟಿನೆಂಟಲ್ ಟ್ರಾನ್ಸ್‌ಲೋಕೆಶನ್ ಯೋಜನೆಯಡಿ ಅವುಗಳನ್ನು ಮಧ್ಯಪ್ರದೇಶಕ್ಕೆ ತರಲಾಗುತ್ತಿದೆ. ಅದೇ ರೀತಿ, ದಕ್ಷಿಣ ಆಫ್ರಿಕಾ ಮತ್ತು ಭಾರತ ಸರ್ಕಾರದ ನಡುವಿನ ಒಪ್ಪಂದವೂ ಅಂತಿಮ ಹಂತದಲ್ಲಿದೆ. ಭಾರತೀಯ ಅರಣ್ಯ ಸಂಸ್ಥೆಯ ಡೀನ್ ಬೈಬಿ ಝಾಲಾ ಅವರು ಸಂಪೂರ್ಣ ಕಾರ್ಯಕ್ರಮವನ್ನು ನೋಡಿಕೊಳ್ಳುತ್ತಿದ್ದಾರೆ. 'ಭಾರತದಲ್ಲಿ ಆಫ್ರಿಕನ್ ಚೀತಾ ಪರಿಚಯ ಯೋಜನೆ' 2009 ರಲ್ಲಿ ರೂಪಿಸಲಾಯಿತು.