ಮಿಜೋರಾಂ: ಶನಿವಾರ ಮಿಜೋರಾಂನ ಐಜ್ವಾಲ್ನ ಮೌಬಾಕ್ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ಮನೆಗಳು ಸುಟ್ಟುಹೋಗಿವೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆರಂಭದಲ್ಲಿ ಹತ್ತಿರದ ಕೋಳಿ ಅಂಗಡಿಯಿಂದ ಬೆಂಕಿ ಕಾಣಿಸಿಕೊಂಡು ನಂತರ ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ ಈ ಅನಾಹುತ ಸಂಭವಿಸಿತು ಎಂದು ಸ್ಥಳೀಯರು ಹೇಳಿದ್ದಾರೆ.
ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಪು ಲಾಲ್ರುಟ್ಕಿಮಾ ಘಟನೆ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.